ಡಿವಿಜಿ ಸುದ್ದಿ, ಬಳ್ಳಾರಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಮತ್ತೊಬ್ಬರಿಗೆ ಕೊರೊನಾ ಸೋಂಕು ಧೃಡಪಟ್ಟಿದೆ.
ಈ ಹಿಂದೆ ಹೊಸಪೇಟೆ ಮೂಲದ ಒಂದೇ ಕುಟುಂಬದ ಮೂವರಲ್ಲಿ ಕೊರೊನಾ ಸೋಂಕು ಧೃಡವಾಗಿತ್ತು. ಒಬ್ಬ 7 ಜನರ ಜೊತೆ ನೇರ ಸಂಪರ್ಕ ಹೊಂದಿದ್ದರು. ಹೀಗಾಗಿ ಆ ಏಳು ಜನರನ್ನು ಈಗಾಗಲೇ ಐಸೋಲೇಷನ್ ಮಾಡಲಾಗಿದ್ದು, ಜಿಲ್ಲಾ ಆಸ್ನೀಡಲಾಗುತ್ತಿತ್ತು.
ಇಂದು ಏಳು ಜನರ ರಕ್ತ ಪರೀಕ್ಷೆ ವರದಿ ಬಂದಿದ್ದು, ಏಳರಲ್ಲಿ ಒಬ್ಬರಿಗೆ ಸೋಂಕು ಧೃಡವಾಗಿದೆ. ಅಲ್ಲದೇ ಏಳು ಜನರು 21 ಜನರ ಜೊತೆಯಲ್ಲಿ ಸಂಪರ್ಕ ಹೊಂದಿದ್ದು, ಆ 21 ಜನರನ್ನು ಸಹ ಹೋಮ್ ಕ್ವಾರಂಟೈನ್ ಮಾಡಲಾಗಿದೆ. ಅವರ ರಕ್ತದ ಮಾದರಿ ವರದಿಗೆ ಜಿಲ್ಲಾಡಳಿತ ಕಾಯುತ್ತಿದೆ.