ಡಿವಿಜಿ ಸುದ್ದಿ, ಬಳ್ಳಾರಿ: ಸಂಸದ ವೈ.ದೇವೇಂದ್ರಪ್ಪ ಅವರು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಎಲ್ಲ ಜಿಲ್ಲೆಯ ಸಂಸದರೊಂದಿಗೆ ನಡೆಸಿದ ವಿಡಿಯೋ ಕಾನ್ಫೆರೆನ್ಸ್ ನಲ್ಲಿ ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಬಳ್ಳಾರಿ ಭಾಗದ ಜನತೆ ಬೆಳೆದ ಮೆಣಸಿನಕಾಯಿಯನ್ನು ಬ್ಯಾಡಗಿಗೆ ತಲುಪಿಸಲು ಕಿಸಾನ್ ರೈಲಿನ ವ್ಯವಸ್ಥೆಗೆ ವಿನಂತಿಸಿಕೊಂಡರು. ಆ ಕ್ಷಣದಲ್ಲಿ ವಿಡಿಯೋ ಕಾನ್ಫರೆನ್ಸ್ ನಲ್ಲಿದ್ದ ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ್ ಅಂಗಡಿಯವರು ಒಪ್ಪಿಗೆ ಸೂಚಿಸಿದ್ದು, ಮುಂದಿನ ದಿನಗಳಲ್ಲಿ ರೈತರೊಂದಿಗೆ ಚರ್ಚೆ ನಡೆಸಿ ರೈಲಿನ ಒಡಾಟಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದರು.