ಡಿವಿಜಿ ಸುದ್ದಿ, ಬಳ್ಳಾರಿ: ತುಂಗಭದ್ರಾ ಜಲಾಶಯದಿಂದ ಬಳ್ಳಾರಿ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ತಿಳಿಸಿದರು.
ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮ ಮತ್ತು ಪಾಲಿಕೆ ಸಹಯೋಗದಲ್ಲಿ ಸತ್ಯನಾರಾಯಣಪೇಟೆಯಲ್ಲಿ ನಿರಂತರ ಕುಡಿಯುವ ನೀರು ಸರಬರಾಜು ಯೋಜನೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ಬಳ್ಳಾರಿ ನಗರ ನಗರಕ್ಕೆ ಇನ್ಮುಂದೆ ನೀರಿನ ಕೊರತೆಯಾಗುವುದಿಲ್ಲ. ನಗರ ಇಂದು 12 ವಲಯಗಳಿಗೆ ನೀರು ಪೂರೈಕೆಗೆ ಚಾಲನೆ ನೀಡಲಾಗಿದ್ದು, ಇನ್ನುಳಿದ 15 ವಲಯಗಳನ್ನು ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸಲಾಗುವುದು ಎಂದರು.



