ಡಿವಿಜಿ ಸುದ್ದಿ, ಬಳ್ಳಾರಿ: ಕೊರೊನಾ ಸೋಂಕಿನಿಂದ ಮೃತಪಟ್ಟವರ ದೇಹವನ್ನು ಅಮಾನವೀಯವಾಗಿ ಗುಂಡಿಗೆ ಎಸೆದು ಅಂತ್ಯ ಸಂಸ್ಕಾರ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಕುರಿತು ಬಳ್ಳಾರಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ
ಈ ಸುದ್ದಿ ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. ಇದರಿಂದ ಕ್ಷಮೆ ಕೋರಿದ ಜಿಲ್ಲಾಧಿಕಾರಿ, ತಪ್ಪಿಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
https://www.facebook.com/DKShivakumar.official/posts/2759188370968031
ಸೋಮವಾರ ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾಗೆ 9 ಜನ ಸಾವನ್ನಪ್ಪಿದ್ದರು. ಇವರ ಮೃತ ದೇಹವನ್ನು ಅಮಾನವೀಯವಾಗಿ ಬೇಕಾಬಿಟ್ಟಿಯಾಗಿ ಗುಂಡಿಗೆ ಎಸೆದು ಮಣ್ಣು ಮಾಡಲಾಗಿತ್ತು. ಈ ದೃಶ್ಯ ಅಮಾನವೀಯವಾಗಿತ್ತು. ಶವ ಸಂಸ್ಕಾರ ಮಾಡುವಾಗ ಸಿಬ್ಬಂದಿ ಶವವನ್ನು ಮೇಲಿಂದ ಎಸೆದಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಈ ಕುರಿತು ವಿಡಿಯೋ ವೈರಲ್ ಆಗಿತ್ತು. ಅಲ್ಲದೆ ಆಕ್ರೋಶ ಸಹ ವ್ಯಕ್ತವಾಗಿತ್ತು.
ಈ ಪ್ರಕರಣದ ಕುರಿತು ತನಿಖೆ ನಡೆಸುವಂತೆ ಆದೇಶಿಸಿದ್ದು, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ನೇತೃತ್ವದಲ್ಲಿ ತನಿಖೆ ನಡೆಸುವಂತೆ ತಿಳಿಸಿದ್ದಾರೆ. ಎರಡು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚಿಸಿದ್ದಾರೆ.
ಕುಟುಂಬಸ್ಥರು ಹಾಗೂ ಸಾರ್ವಜನಿಕರ ಬಳಿ ಕ್ಷಮೆಯಾಚಿಸಿದ್ದಾರೆ. ಅಲ್ಲದೆ ಮಾರ್ಚುರಿ ಸ್ಟ್ಯಾಫ್ ಬದಲಾವಣೆ ಮಾಡಿ ಡಿಸಿ ಆದೇಶಿಸಿದ್ದಾರೆ. ಅಲ್ಲದೆ ಇನ್ನು ಮುಂದೆ ಶವಗಳ ನಿರ್ವಹಣೆಗೆ ವಿಧಿವಿಜ್ಞಾನ ಮತ್ತು ವಿಮ್ಸ್‍ನ ನುರಿತ ತಂಡ ನೇಮಕ ಮಾಡುವಂತೆ ಸೂಚಿಸಿದ್ದಾರೆ.



