ಡಿವಿಜಿ ಸುದ್ದಿ, ಬೆಂಗಳೂರು: ನಗರದಲ್ಲಿ ದಿದನದಿಂದ ದಕ್ಕೆ ಕೋವಿಡ್ –19 ಸೋಂಕು ಹೆಚ್ಚುತ್ತರುವ ಹಿನ್ನೆಲೆ ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್ ಕುಮಾರ್ ಅವರನ್ನು ರಾಜ್ಯ ಸರ್ಕಾರ ಶನಿವಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಅವರಿಗೆ ಬಿಬಿಎಎಂಪಿ ಆಯುಕ್ತ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಮಂಜುನಾಥ್ ಪ್ರಸಾದ್ ಈ ಹಿಂದೆ ಬಿಬಿಎಂಪಿ ಆಯುಕ್ತರಾಗಿ ಕಾರ್ಯ ನಿರ್ವಹಿಸಿದ್ದರು.
ಅನಿಲ್ ಕುಮಾರ್ ಅವರನ್ನು ಸಾರ್ವಜನಿಕ ಉದ್ದಿಮೆಗಳ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈ ಹುದ್ದೆಯಲ್ಲಿದ್ದ ವಿ. ರಶ್ಮಿ ಮಹೇಶ್ ಅವರನ್ನು ಕನ್ನಡ ಮತ್ತು ಸಂಸ್ಕೃತಿಕ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ.



