ಡಿವಿಜಿ ಸುದ್ದಿ, ಬೆಂಗಳೂರು: ಈ ಬಾರಿಯ ವಿಧಾನಮಂಡಲ ಅಧಿವೇಶನ ಸೆ.21 ರಿಂದ ಸೆ.30 ರವರೆಗೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಮಾತನಾಡಿ, ಸೆ. 21 ರಿಂದ ವಿಧಾನಮಂಡಲ ಅಧಿವೇಶನ ನಡೆಸಲು ತೀರ್ಮಾನಿಸಿದ್ದೇವೆ. ಈ ಕುರಿತು ವಿಧಾನಸಭಾಧ್ಯಕ್ಷ ಮತ್ತು ವಿಧಾನಪರಿಷತ್ ಸ್ಪೀಕರ್ ಜೊತೆಗೆ ಚರ್ಚಿಸಿ ಅಧಿವೇಶನ ನಡೆಯುವ ಸ್ಥಳದ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.



