Connect with us

Dvgsuddi Kannada | online news portal | Kannada news online

ಡಿ.ಜೆ.ಹಳ್ಳಿ ಗಲಭೆ; ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಯಡಿಯೂರಪ್ಪ

ರಾಜ್ಯ ಸುದ್ದಿ

ಡಿ.ಜೆ.ಹಳ್ಳಿ ಗಲಭೆ; ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಸಿಎಂ ಯಡಿಯೂರಪ್ಪ

ಡಿವಿಜಿ ಸುದ್ದಿ,  ಬೆಂಗಳೂರು: ಡಿ.ಜೆ.ಹಳ್ಳಿಯಲ್ಲಿ ಗಲಭೆ ಸೃಷ್ಟಿಸಿದ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ‌ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಹಾಗೂ ಪೋಲೀಸ್ ಠಾಣೆ ಮೇಲೆ ದಾಳಿ‌, ಗಲಭೆ ನಡೆಸಿರುವುದು ಖಂಡನೀಯ. ಈಗಾಗಲೇ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ‌ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದ್ದು,  ಸರ್ಕಾರ ದಾಂಧಲೆ ಹತ್ತಿಕ್ಕಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ ಎಂದಿದ್ದಾರೆ.

ನಿನ್ನೆ ರಾತ್ರಿ ನಡೆದ ಗಲಭೆಯಲ್ಲಿ ಪತ್ರಕರ್ತರು, ಪೋಲೀಸರು, ಸಾರ್ವಜನಿಕರ ‌ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ. ಇಂತಹ ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ. ಜನರು ಈ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೆ ಸಂಯಮದಿಂದ ವರ್ತಿಸಬೇಕು  ಎಂದು  ಮನವಿ ಮಾಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top