ಡಿವಿಜಿ ಸುದ್ದಿ, ಬೆಂಗಳೂರು: ಮಹಿಳೆಯನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿಗೆ ವಾರ್ನ್ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮಹಿಳೆಯರ ಬಗ್ಗೆ ಯಾರೂ ಕೇವಲವಾಗಿ ಮಾತನಾಡಬಾರದು. ಒಬ್ಬ ಸಚಿವರಾಗಿ ಮಾಧುಸ್ವಾಮಿ ಹೀಗೆ ಮಾತನಾಡಿರುವುದು ಸರಿಯಲ್ಲ. ಅವರನ್ನು ಕರೆದು ಎಚ್ಚರಿಕೆ ನೀಡುತ್ತೇನೆ. ನೊಂದಿರುವ ಮಹಿಳೆಯನ್ನೂ ಕರೆದು ಮಾತನಾಡುತ್ತೇನೆ ಎಂದರು.



