ಡಿವಿಜಿ ಸುದ್ದಿ, ಬೆಂಗಳೂರು: ಕೆಜಿ ಹಳ್ಳಿ ಪೊಲೀಸ್ ಠಾಣೆಯ ಮುಖ್ಯ ಪೇದೆಯೊಬ್ಬರು ರೈಲ್ವೆ ಟ್ರ್ಯಾಕ್ ಬಳಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹೆಗ್ಡೆ ನಗರದಲ್ಲಿ ನಡೆದಿದೆ.
ಕೆ.ಜಿ.ಹಳ್ಳಿ ಪೊಲೀಸ್ ಠಾಣೆ ರವೀಂದ್ರ ಆತ್ಮಹತ್ಯೆಗೆ ಶರಣಾದ ಮುಖ್ಯ ಪೇದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ರವೀಂದ್ರ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಮೃತ ದೇಹವನ್ನು ನೋಡಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು, ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಾಗಿಸಿದ್ದರು. ಬಳಿಕ ಮೃತ ದೇಹದ ಗುರುತು ಪತ್ತೆಹಚ್ಚಿದ್ದರು.ಈ ಸಂಬಂಧ ಕೆ.ಜಿ.ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.



