ಡಿವಿಜಿ ಸುದ್ದಿ, ಬೆಂಗಳೂರು: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿಗೆ ಆಗಮಿಸಿದ್ದ ಬಿಸಿಯೂಟ ಕಾರ್ಯಕರ್ತರನ್ನು ರೈಲ್ವೆ ನಿಲ್ದಾಣದಲ್ಲಿಯೇ ತಡೆಯಲಾಗಿತ್ತು. ಪ್ರತಿಭಟನೆಗೆ ಅವಕಾಶ ನೀಡದಿದ್ದರಿಂದ ರೈಲ್ವೆ ನಿಲ್ದಾಣದಲ್ಲಿಯೇ ಬಿಸಿಯೂಟ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾಗಿದ್ದರು. ಶಿಕ್ಷಣ ಸಚಿವರ ನಮವಿಗೆ ಸ್ಪಂದಿಸಿದ ಪ್ರತಿಭಟನಕಾರರು ತಾತ್ಕಾಲಿಕವಾಗಿ ಪ್ರತಿಭಟನೆ ಕೈ ಬಿಟ್ಟಿದ್ದಾರೆ.
ಕನಿಷ್ಟ ಕೂಲಿ ಜಾರಿಗೆ ತರುವುದು, ನಿವೃತ್ತಿ ವೇತನ ನೀಡುವುದು, ಖಾಸಗೀಕರಣ ಕೈ ಬಿಡವುದು ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದರು. ರಾಜ್ಯದ ವಿವಿಧ ಭಾಗದಿಂದ ಬಂದಿದ್ದ ಬಿಸಿಯೂಟ ಕಾರ್ಯಕರ್ತರು ಬೃಹತ್ ಮಟ್ಟದಲ್ಲಿ ಪ್ರತಿಭಟನೆ ನಡೆಸುವ ಯೋಜನೆ ರೂಪಿಸಿದ್ದರು. ಆದರೆ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಪ್ರತಿಭಟನೆಗೆ ಅವಕಾಶ ನೀಡಿದ್ದರಿಂದ ಪ್ರತಿಭಟನೆ ರೈಲ್ವೆ ನಿಲ್ದಾಣದಲ್ಲಿಯೇ ಪ್ರತಿಭಟನೆ ನಡೆಸುತ್ತಿದ್ದರು.
ನಮ್ಮ ಪ್ರತಿಭಟನೆಗೆ ಸರ್ಕಾರ ಸ್ಪಂದಿಸುವ ವರೆಗೂ ಸ್ಥಳ ಬಿಟ್ಟು ಹೋಗಲ್ಲ ಎಂದು ರೈಲ್ವೆ ನಿಲ್ದಾಣದಲ್ಲಿಯೇ ಪ್ರಭಟನೆ ನಡೆಸುತ್ತಿದ್ದರು. ಶಿಕ್ಷಣ ಸಚಿವರ ಪರವಾಗಿ ಇಲಾಖೆಯ ಕಾರ್ಯದರ್ಶಿಗಳು ಸ್ಥಳಕ್ಕೆ ಆಗಮಿಸಿ ಪ್ರತಿಭಟನೆ ವಾಪಸ್ಸು ಪಡೆಯುವಂತೆ ಮನವೊಲಿಸಿದರು, ಪ್ರತಿಭಟನಕಾರು ಪ್ರತಿಭಟನೆ ಮುಂದುವರಿಸಿದ್ದರು. ಆಗ ಶಿಕ್ಷಣ ಸುರೇಶ್ ಕುಮಾರ್ ಅವರು, ಇದೇ ತಿಂಗಳು 13 ರಂದು ಬಿಸಿಯೂಟ ಕಾರ್ಯಕರ್ತರ ಸಭೆ ನಡೆಸುತ್ತೇವೆ ಎಂದು ಮೌಖಿಕವಾಗಿ ಆದೇಶ ಕೊಟ್ಟಿದ್ದರಿಂದ ಪ್ರತಿಭಟನೆ ವಾಪಸ್ಸು ಪಡೆದಿದ್ದಾರೆ.
ಶಿಕ್ಷಣ ಸಚಿವರ ಮನವಿಗೆ ಸ್ಪಂದಿಸಿ ಪ್ರತಿಭಟನೆ ಕೈ ಬಿಟ್ಟಿದ್ದೇವೆ. ಒಂದು ವೇಳೆ ಫೆ. 13 ರಂದು ಸಭೆಯಲ್ಲಿ ಬಿಸಿಯೂಟ ಕಾರ್ಯಕರ್ತರ ಬೇಡಿಕೆ ಈಡೇರಿಸದಿದ್ದಲ್ಲಿ ಮತ್ತೆ ಫೆ. 15 ರಂದು ಪ್ರತಿಭಟನೆ ನಡೆಸಲಾಗುವುದು ಎಂದು ಪ್ರತಿಭಟನಕಾರರು ಎಚ್ಚರಿಕೆ ನೀಡಿದರು.



