ಡಿವಿಜಿ ಸುದ್ದಿ, ಬೆಂಗಳೂರು: ವಿವಿಧಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದ ಪ್ರತಿಭಟನಕಾರರನ್ನ ಪೊಲೀಸರು ಯಶವಂತಪುರ, ಬೆಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಯಿತು. ಪೊಲೀಸರ್ ವಿರೋಧದ ನಡುವೆಯೂ ರೈಲ್ವೆ ನಿಲ್ದಾಣದಲ್ಲಿಯೇ ಪ್ರತಿಭಟನೆ ನಡೆಸಿದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ ರಾಜಧಾನಿಗೆ ಆಗಮಿಸಿರುವ ಕಾರ್ಯಕರ್ತೆಯರು ಸಿಐಟಿಯು ನಾಯಕಿ ವರಲಕ್ಷ್ಮಿ ನೇತೃತ್ವದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ ನಡೆಸಲು ಸಜ್ಜಾಗಿದ್ದರು. ಆದರೆ, ಪ್ರತಿಭಟನೆ ನಡೆಸಲು ಪೊಲೀಸರು ಅವಕಾಶ ಕೊಟ್ಟಿಲ್ಲದಿದ್ದರಿಂದ ರೈಲ್ವೆ ನಿಲ್ದಾಣದಲ್ಲಿಯೇ ಪ್ರತಿಭಟನೆಗೆ ಮುಂದಾದ ಬಿಸಿಯೂಟ ಕಾರ್ಯಕರ್ತೆಯರನ್ನು ಪೊಲೀಸರು ವಶಕ್ಕೆ ಪಡೆದರು.
ಮುಂಜಾಗ್ರತ ಕ್ರಮವಾಗಿ ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಅವರನ್ನು ವಶಕ್ಕೆ ಪಡೆಯಲಾಗಿತ್ತು. ಇನ್ನು ಕೆಲವು ಬಿಸಿಯೂಟ ಕಾರ್ಯಕರ್ತರನ್ನು ಮೆಜೆಸ್ಟಿಕ್ನ ಸೆಂಟ್ರಲ್ ರೈಲ್ವೇ ನಿಲ್ದಾಣದಲ್ಲಿ ಪೊಲೀಸರು ದಿಗ್ಬಂಧನ ಹಾಕಿದ್ದಾರೆ. ಅತ್ತ ಫ್ರೀಡಂ ಪಾರ್ಕ್‍ಗೆ ಬರುತ್ತಿದ್ದ ಸಾವಿರಾರು ಕಾರ್ಯಕರ್ತೆಯರನ್ನು ಪೀಣ್ಯದ ಬಳಿಯೇ ತಡೆಯಲಾಗಿದೆ. ಬಿಸಿಯೂಟ ತಯಾರಿಕೆಯಲ್ಲಿ ಖಾಸಗೀಕರಣ ಕೈ ಬಿಡಬೇಕು, ಕನಿಷ್ಟ ಕೂಲಿ ಜಾರಿಗೆ ತರುವುದು ಜೊತೆ ನಿವೃತ್ತಿ ವೇತನ ನೀಡುವಂತೆ ಆಗ್ರಹಿಸಿ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ ಮಂದುವರಿಸಿದ್ದಾರೆ.



