ಡಿವಿಜಿ ಸುದ್ದಿ, ಬೆಂಗಳೂರು: ಬಹು ಭಾಷಾ ನಟಿ ರಶ್ಮಿಕಾ ಮಂದಣ್ಣ ಕುಟುಂಬಸ್ಥರಿಗೆ ಐಟಿ ಸಮನ್ಸ್ ನೀಡಿದ್ದು, ಸೋಮವಾರ ವಿಚಾರಣೆಗೆ ದಾಖಲೆ ಸಮೇತ ಹಾಜರಾಗುವಂತೆ ಸೂಚಿಸಲಾಗಿದೆ.
ಮೈಸೂರಿನ ಐಟಿ ಕಚೇರಿಗೆ ಹಾಜರಾಗುವಂತೆ ರಶ್ಮಿಕಾ ಮತ್ತು ಕುಟುಂಬಸ್ಥರಿಗೆ ಅಧಿಕಾರಿಗಳು ಸೂಚನೆ ನೀಡಲಾಗಿದೆ. ಐಟಿ ಅಧಿಕಾರಿಗಳು ರಶ್ಮಿಕಾ ಮನೆಯಲ್ಲಿ ಸತತ ಎರಡು ದಿನಗಳ ಕಾಲ ಸಾಕಷ್ಟು ಮಾಹಿತಿ ಸಂಗ್ರಹಿಸಿದ್ದರು. ದಾಖಲೆ ಜತೆ 25 ಲಕ್ಷ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತೆರಿಗೆ ವಂಚನೆ ಮಾಡಿರುವ ಕೋಟ್ಯಂತರ ಆಸ್ತಿಯ ಪತ್ರಗಳನ್ನು ವಶಕ್ಕೆ ಪಡೆದುಕೊಂಡಿದ್ದು, ಈ ಎಲ್ಲಾ ಮಾಹಿತಿಯ ಆಧಾರದ ಮೇಲೆ ಐಟಿ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ.
ದಾಳಿ ವೇಳೆಸಂದರ್ಭದಲ್ಲಿ 3.94 ಕೋಟಿ ರೂ. ಮೊತ್ತದ ಅಘೋಷಿತ ಆದಾಯ, 1.5 ಕೋಟಿ ರೂಪಾಯಿಗೆ ತೆರಿಗೆ ಕಟ್ಟಿಲ್ಲ. ರಶ್ಮಿಕಾ ಹೆಸರಲ್ಲಿ ಎರಡು ಪ್ಯಾನ್ ಕಾರ್ಡ್ ಬಳಸಿದ್ದು, ಒಂದು ಪ್ಯಾನ್ ಕಾರ್ಡ್ ಮೂಲಕ ಮಾತ್ರ 2016-17 ರಲ್ಲಿ ಆದಾಯ ತೆರಿಗೆ ಸಲ್ಲಿಕೆ ಮಾಡಲಾಗಿದೆ. ತಂದೆ ಒಡೆತನದ, ಕಲ್ಯಾಣ ಮಂಟಪದ ವ್ಯವಹಾರದ ಬಗ್ಗೆಯೂ ಕೆಲ ಮಾಹಿತಿ ಮುಚ್ಚಿಟ್ಟ ಆರೋಪ ಕೇಳಿ ಬಂದಿದೆ.
ಸತತ 29 ಗಂಟೆ ಪರಿಶೀಲನೆ ಬಳಿಕ 1 ಸೂಟ್‍ಕೇಸ್, 3 ಹ್ಯಾಂಡ್ ಬ್ಯಾಗ್, 1 ಬಾಕ್ಸ್ ದಾಖಲೆ ತೆಗೆದುಕೊಂಡು ಹೋಗಿದ್ದಾರೆ.



