ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ಭೀತಿ ಹಿನ್ನೆಲೆ ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ನಿರ್ದೇಶನದಂತೆ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಆರ್ ಎಸ್ ಎಸ್ ನ ಅಖಿಲ ಭಾರತೀಯ ಪ್ರತಿನಿಧಿ ಸಭೆಯನ್ನು ರದ್ದುಗೊಳಿಸಲಾಗಿದೆ.
ಈ ಕುರಿತು ಟ್ವೀಟ್ ಮಾಡಿರುವ ಕಾರ್ಯವಾಹ ಸುರೇಶ್ ಭಯ್ಯಾಜಿ ಜೋಶಿ, ಕೊರನಾ ಭೀತಿಯ ಗಂಭೀರತೆ ಪರಿಗಣಿಸಿ, ಕೇಂದ್ರ ಹಾಗೂ ರಾಜ್ಯ ಸರಕಾರಗಳ ನಿರ್ದೇಶನದ ಅನುಸಾರ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಅಖಿಲ ಭಾರತೀಯ ಪ್ರತಿನಿಧಿ ಸಭೆ ರದ್ದುಗೊಳಿಸಿದ್ದೇವೆ. ಸ್ವಯಂ ಸೇವಕರು ಸರ್ಕಾರಗಳ ಜೊತೆ ಕೈಜೋಡಿಸಿ ಸಮಾಜದದಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡಬೇಕೆಂದು ಕರೆ ನೀಡಿದ್ದಾರೆ.