ಇಂದು ಮಧ್ಯರಾತ್ರಿಯಿಂದಲೇ ಭದ್ರಾ ಡ್ಯಾಂ ಗೇಟ್ ಓಪನ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ಭದ್ರಾವತಿ: ಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 2020-21 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಇಂದು (ಜು.22) ಮಧ್ಯರಾತ್ರಿಯಿಂದಲೇ ಡ್ಯಾಂ ಗೇಟ್ ಓಪನ್ ಮಾಡಲಾಗುವುದು ಎಂದು ಕರ್ನಾಟಕ ನೀರಾವ ನಿಗಮ ನಿಯಮಿತಿ ತಿಳಿಸಿದೆ.

ಭದ್ರಾ ಡ್ಯಾಂ ಎಡದಂಡೆ ಹಾಗೂ ಬಲದಂಡೆಯ ನಾಲೆಗಳಿಗೆ ಇಂದು ಮಧ್ಯರಾತ್ರಿಯಿಂದ ನೀರು ಹರಿಯಲಿದೆ.  ಈ ಮೂಲಕ ಮುಂಗಾರು ಹಂಗಾಮಿಗೆ ಭತ್ತ ನಾಟಿ ಮಾಡಲು ನೀರಿಗಾಗಿ ಕಾಯುತ್ತಿದ್ದ ರೈತರಲ್ಲಿ ಮುಖದಲ್ಲಿ ಸಂತಸ ಮೂಡಿದೆ.

109790388 320236689110740 5400358070387204880 n

ಭದ್ರಾ ಡ್ಯಾಂ ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ರೈತರ ಜೀವನಾಡಿಯಾಗಿದ್ದು, ಈ ಎರಡು ಜಿಲ್ಲೆಯ ನೀರಾವರಿ ಪ್ರದೇಶಕ್ಕೆ  ನೀರು ಒದಗಿಸಲಿದೆ.  ಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತ ಮಾತ್ರವಲ್ಲದೆ, ತೆಂಗು, ಅಡಿಕೆ, ಕಬ್ಬು ಮಕ್ಕೆಜೋಳ ಸೇರಿದಂತೆ ಇತರೆ ಬೆಳೆಗಳನ್ನು ಬೆಳೆಯಲಾಗುತ್ತಿದೆ.

ಭದ್ರಾ ಡ್ಯಾಂ ಇಂದಿನ ನೀರಿನ ಮಟ್ಟ 153.2 ರಷ್ಟಿದ್ದು, ಒಳ ಹರಿವು ಸ್ವಲ್ಪ ಇಳಿಕೆಯಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ತಗ್ಗಿದ್ದರಿಂದ  ಒಳ ಹರಿವು 3,395 ರಷ್ಟಿದೆ. ಕಳೆದ ವರ್ಷ ಈ ದಿನ 138 ಅಡಿಯಷ್ಟು ನೀರು ಸಂಗ್ರಹವಾಗಿತ್ತು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *