ಡಿವಿಜಿ ಸುದ್ದಿ, ದಾವಣಗೆರೆ: ರಾಯಲ್ ಎನ್ ಫೀಲ್ಡ್ ಬೈಕ್ ಮತ್ತು ಲಾರಿ ನಡುವೇ ಭೀಕರ ಅಪಘಾತ ನಗರದ ಪಿ.ಬಿ ರಸ್ತೆಯಲ್ಲಿ ನಡೆದಿದೆ. ಬೈಕ್ ನಲ್ಲಿದ್ದ ಇಬ್ಬರು ಆಯುರ್ವೇದ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳಿಗೆ ತೀವ್ರ ಸ್ವರೂಪದ ಗಾಯವಾಗಿದೆ.
ಒಬ್ಬನ ಸ್ಥಿತಿ ಚಿಂತಾಜನಕ ಇನ್ನೊಬ್ಬ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಚಲಿಸುತ್ತಿದ್ದ ಬೈಕ್ ಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ದಾವಣಗೆರೆ ಚಿಗಟೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ದಾವಣಗೆರೆ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



