ಡಿವಿಜಿ ಸುದ್ದಿ, ಬೆಂಗಳೂರು: ಟಿಪ್ಪು ಸುಲ್ತಾನ್ ಯಾವುದೇ ಪಕ್ಷ, ಜಾತಿ, ಧರ್ಮಕ್ಕೆ ಸೇರಿದವನಲ್ಲ. ಟಿಪ್ಪು ಸುಲ್ತಾನ್ ಈ ನೆಲದ ಮಣ್ಣಿನ ಮಗ. ಟಿಪ್ಪು ಸುಲ್ತಾನ್ ನನ್ನು ಸಣ್ಣವನಾಗಿ ಮಾಡಬಾರದು ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಹೇಳಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಸುವರ್ಣ ಸೌಧದಲ್ಲಿ ಸಂಗ್ಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಯ ಚರ್ಚೆ ನಂತರ, ಟಿಪ್ಪುವನ್ನು ಹೊಗಳಿದ್ದಾರೆ. ಸಂಗ್ಗೊಳ್ಳಿ ರಾಯಣ್ಣ ಬ್ರಿಟಿಷ್ ವಿರುದ್ಧ ಹೋರಾಡಿದ ಕಮಾಂಡರ್. ಅದೇ ರೀತಿ ಟಿಪ್ಪು ಸುಲ್ತಾನ್ ಕೂಡ ಎಂದರು.
ಟಿಪ್ಪು ಈ ನೆಲದ ಮಗ ವೀರ ಹೋರಾಟಗಾರ. ಟಿಪ್ಪು ಸುಲ್ತಾನ್ ಯಾವುದೇ ಪಕ್ಷ, ಜಾತಿ ಹಾಗೂ ಧರ್ಮಕ್ಕೆ ಸೇರಿದವನಲ್ಲ ಎಂದಿದ್ದಾರೆ. ಪಠ್ಯದಲ್ಲಿ ಟಿಪ್ಪು ಪಾಠ ಕೈ ಬಿಟ್ಟಿಲ್ಲ. ಐದನೇ ತರಗತಿಯಿಂದ ಏಳನೇ ತರಗತಿಗೆ ಹಾಕಿದ್ದಾರೆ. ಗಾಂಧೀಜಿ ಇಂದ ಟಿಪ್ಪು ತನಕ ವಿದ್ಯಾರ್ಥಿಗಳು ಎಲ್ಲವನ್ನೂ ಓದಬೇಕು ಎಂದರು.



