ಡಿವಿಜಿ ಸುದ್ದಿ, ರಾಯಚೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಾಹೀ ಜಾಮೀಯಾ ಮಸೀದಿಯಿಂದ ಮೆರವಣಿಗೆ ಬಂದ ಪ್ರತಿಭಟನಾಕಾರರು ತೀನ್ ಕಂದಿಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ನಮಾಜ್ ಬಳಿಕ ಪ್ರತಿಭಟನೆಗೆ ಮುಂದಾದ ಮುಸ್ಲಿಂ ಸಂಘಟನಕಾರರನ್ನ ಪೊಲೀಸರು ಬಂಧಿಸಿ ಕರೆದೊಯ್ದರು.
ಪ್ರತಿಭಟನೆಗೆ ಅವಕಾಶ ಮಾಡಿಕೊಡದ ಪೋಲಿಸರು ಹೋರಾಟ ನಡೆಸದಂತೆ ಮುನ್ನೆಚ್ಚರಿಕೆ ನೀಡಿದ್ದರು. ಆದರೂ ಪ್ರತಿಭಟನೆಗಿಳಿದ ಹಿನ್ನೆಲೆಯಲ್ಲಿ ಸುಮಾರು 20 ಜನರನ್ನು ಬಂಧಿಸಿದರು. ಸ್ಥಳದಲ್ಲಿ ಸೇರಿದ್ದ ಉಳಿದ ಪ್ರತಿಭಟನಾಕಾರರನ್ನು ಪೋಲಿಸರು ಚದುರಿಸಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಮುಸ್ಲಿಂ ಹಾಗೂ ದಲಿತಪರ ಸಂಘಟನೆಗಳು ಪಟ್ಟಣದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ನಡೆಸಿ ಧರ್ಮಾಧಾರಿತ ಕಾಯ್ದೆ ಬೇಡ ಎಂದು ಘೋಷಣೆ ಕೂಗಿದರು.



