ಡಿವಿಜಿ ಸುದ್ದಿ, ಬೆಂಗಳೂರು: ಮಾರ್ಚ್ 5 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಅಧಿವೇಶನದಲ್ಲಿ ದೃಶ್ಯ ಮಾಧ್ಯಮದ ಕ್ಯಾಮರಾ ಮ್ಯಾನ್ ಗಳಿಗೆ ಮತ್ತೆ ರಾಜ್ಯ ಸರ್ಕಾರ ನಿಷೇಧ ಹೇರಿದೆ.
ಈ ಹಿಂದಿನ ಅಧಿವೇಶನದಲ್ಲಿ ಹೇರಿದ್ದ ನಿಷೆಧವನ್ನು ಎಲ್ಲಾ ಮಾಧ್ಯಮಗಳು ಪ್ರಶ್ನೆ ಮಾಡಿದ್ದವು. ಆಗ ಬೃಹತ್ ಮಟ್ಟದಲ್ಲಿ ಪ್ರತಿಭಟನೆಯಾದ ನಂತರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಧ್ಯಮಗಳನ್ನು ಹೊರಗೆ ಇಟ್ಟು ಸದನ ನಡೆಸುವುದು ಸರಿಯಲ್ಲ. ಹೀಗಾಗಿ ಅವಕಾಶ ನೀಡುವಂತೆ ಸ್ಪೀಕರ್ ಆದೇಶಿಸಿದ್ದರು.
ಬಜೆಟ್ ಅಧಿವೇಶನದ ದೃಶ್ಯ ಸೆರೆ ಹಿಡಿಯಲು ಎಲೆಕ್ಟ್ರಾನಿಕ್ ಮಾಧ್ಯಮಗಳ ಕ್ಯಾಮರಾಗಳಿಗೆ ವಿಧಾನಸಭೆಯ ಒಳಗೆ ಅವಕಾಶವಿಲ್ಲ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ ಲೋಕಸಭೆ ಮತ್ತು ರಾಜ್ಯಸಭೆ ಮಾದರಿಯ ವ್ಯವಸ್ಥೆ ಇಲ್ಲೂ ಪಾಲಿಸಲಾಗುತ್ತದೆ ಎಂದರು.
ಫೆಬ್ರುವರಿ 17ರಿಂದ 31ರವರಗೆ ವಿಧಾನಮಂಡಲದ ಅಧಿವೇಶನ ನಡೆಯಲಿದೆ. ಮಾರ್ಚ್ 2 ಮತ್ತು 3ರಂದು ಸಂವಿಧಾನದ ಕುರಿತು ಚರ್ಚೆ ನಡೆಯಲಿದೆ. ಮಾರ್ಚ್ 5 ರಂದು ಬಜೆಟ್ ಮಂಡನೆ ಆಗಲಿದೆ ಎಂದರು. ಅಧಿವೇಶನದಲ್ಲಿ ಒಟ್ಟು 6 ಮಸೂದೆ ಮಂಡನೆ ಆಗಲಿವೆ. ಎಲ್ಲಾ ಸದಸ್ಯರು ಅಧಿವೇಶನದ ಚರ್ಚೆಯಲ್ಲಿ ಪಾಲ್ಗೊಳ್ಳಬೇಕು ಎಂದು ಕಾಗೇರಿ ತಿಳಿಸಿದ್ದಾರೆ.



