Connect with us

Dvg Suddi-Kannada News

ಕೊರೊನಾ ಭೀತಿಯಿಂದ ಊರಿಗೆ ಹೋಗುತ್ತಿದ್ದವರ ಕಾರು ಬಂಡೆಗೆ ಡಿಕ್ಕಿ: ಮೂರು ಸಾವು;  ಮೂವರ ಸ್ಥಿತಿ ಗಂಭೀರ

ಪ್ರಮುಖ ಸುದ್ದಿ

ಕೊರೊನಾ ಭೀತಿಯಿಂದ ಊರಿಗೆ ಹೋಗುತ್ತಿದ್ದವರ ಕಾರು ಬಂಡೆಗೆ ಡಿಕ್ಕಿ: ಮೂರು ಸಾವು;  ಮೂವರ ಸ್ಥಿತಿ ಗಂಭೀರ

ಡಿವಿಜಿ ಸುದ್ದಿ, ಬಾಗಲಕೋಟೆ: ಕೊರೊನಾ ಭೀತಿ ಹಿನ್ನೆಲೆ ಬೆಂಗಳೂರಿನಿಂದ ಬೀದರ್ ಗೆ ಹೊರಟಿದ್ದ ಕಾರು ಬಂಡೆಗೆ  ಡಿಕ್ಕಿ ಹೊಡೆದ ಪರಿಣಾಮ ಮೂವರು ಮೂವರು  ಸಾವನ್ನಪ್ಪಿದ್ದು, ಇನ್ನು ಮೂವರಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ  ಇಳಕಲ್ ತಾಲೂಕಿನ ಹಿರೇಕೊಡಗಲಿಯಲ್ಲಿ ನಡೆದಿದೆ.

ಸುವರ್ಣ(40), ಬಸವಣ್ಣೆಪ್ಪ (70) ಹಾಗೂ ಸವಿತಾ (20) ಮೃತಪಟ್ಟವರಾಗಿದ್ದಾರೆ.  ಮೃತರು ಬೀದರ್ ಜಿಲ್ಲೆಯ ಬಾಲ್ಕಿ ತಾಲೂಕಿನ ಕಟಕಚಿಂಚೂಳಿ ಗ್ರಾಮದವರಾಗಿದ್ದಾರೆ.ಕಾರಿನಲ್ಲಿ ಒಟ್ಟು ಆರು ಜನ ಪ್ರಯಾಣಿಸುತ್ತಿದ್ದರ.  ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಬೀದರ್ ಜಿಲ್ಲೆಗೆ ಹೊರಟಿದ್ದರು. ಟ್ರಾಪಿಕ್ ಕಾರಣ ಇಳಕಲ್ ಮಾರ್ಗವಾಗಿ ಹೋಗುತ್ತಿದ್ದಾಗ ಹಿರೇಕೊಡಗಲಿ ಬಳಿ ರಸ್ತೆ ತಿರುವು ಗೊತ್ತಾಗದೆ ಕಾರು ಕಲ್ಲು ಬಂಡೆಗೆ ಹೋಗಿ ಡಿಕ್ಕಿ ಹೊಡೆದಿದೆ.

ಅಪಘಾತ ರಭಸಕ್ಕೆ ಕಾರಿನಲ್ಲಿದ್ದ ಆರು ಜನರು ಗಂಭೀರವಾಗಿ ಗಾಯಗೊಂಡಿದ್ದರು. ಇಳಕಲ್ ಆಸ್ಪತ್ರೆಗೆ ಸಾಗಿಸುವ ವೇಳೆ ಇಬ್ಬರು ಸಾವನ್ನಪ್ಪಿದ್ದರೆ, ಇಳಕಲ್‍ನಿಂದ ಬಾಗಲಕೋಟೆ ಆಸ್ಪತ್ರೆಗೆ ಹೋಗುವ ವೇಳೆ ಮತ್ತೊಬ್ಬರು ಮೃತಪಟ್ಟಿದ್ದಾರೆ.  ಇಳಕಲ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top