ಡಿವಿಜಿ ಸುದ್ದಿ, ಚನ್ನಗಿರಿ: ತಾಲೂಕಿನ ಸಂತೇಬೆನ್ನೂರು ಹೋಬಳಿಯ ಪೊಲೀಸ್ ಕ್ವಾಟರ್ಸ್ ನಲ್ಲಿ ಅಸಮರ್ಪಕ ನೀರು ಪೂರೈಕೆಯಿಂದ ಪೊಲೀಸ್ ಕ್ವಾಟರ್ಸ್ ಸಿಬ್ಬಂದಿ ಪರದಾಡುವಂತಾಗಿದೆ.
ತಾಲೂಕಿನಲ್ಲಿಯೇ ದೊಡ್ಡ ಹೋಬಳಿಯಾದ ಸಂತೇಬೆನ್ನೂರಿನಲ್ಲಿ ಕುಡಿಯುವ ನೀರು ಸಮರ್ಪಕವಾಗಿ ಪೂರೈಕೆ ಆಗುತ್ತಿಲ್ಲ. ಸಂತೇಬೆನ್ನೂರಿನ ಪೋಲಿಸ್ ಕ್ವಾಟ್ರಸ್ ಗೆ ಸೂಳೆಕೆರೆಯಿಂದ ನೀರು ಪೂರೈಕೆಯಾಗುತ್ತಿದ್ದು, ಸಮಯಕ್ಕೆ ಸರಿಯಾಗಿ ಬರುತ್ತಿಲ್ಲ. ಅದು ಕೂಡ ವಾರಕ್ಕೆ ಒಂದು ಸಲ ಮಾತ್ರ ಬರುತ್ತದೆ.

ಒಂದು ಗಂಟೆ ಮಾತ್ರ ನೀರು ಬರುತ್ತಿದ್ದು, ಆ ಒಂದು ಗಂಟೆಯಲ್ಲಿ ನೀರು ಹಿಡಿದುಕೊಳ್ಳದಿದ್ದರೆ, ಮುಂದಿನ ವಾರ ಬರುವವರೆಗೆ ನೀರಿಗಾಗಿ ಕಾಯುವ ಸ್ಥಿತಿ ನಿರ್ಮಾಣವಾಗಿದೆ. ಮೂರ್ನಾಲ್ಕು ವರ್ಷಗಳಿಂದ ಇದೇ ಸಮಸ್ಯೆಯಾಗಿದೆ.

ಸಮರ್ಪಕವಾಗಿ ನೀರಿಲ್ಲದೆ ತುಂಬಾ ಸಮಸ್ಯೆಯಾಗಿದ್ದು, ತಾಲೂಕು ಹಾಗೂ ಜಿಲ್ಲಾ ಪಂಚಾಯ್ತಿ ಅಧಿಕಾರಿಗಳು ಇತ್ತ ಗಮನ ಹರಿಸಿ ಪೋಲೀಸರ ಪೊಲೀಸ್ ಕ್ವಾಟರ್ಸ್ ನಲ್ಲಿನ ಕುಡಿಯುವ ನೀರಿನ ಸಮಸ್ಯೆ ನಿವಾರಿಸಿಸಬೇಕೆಂದು ಇಲ್ಲಿನ ನಿವಾಸಿಗಳು ಒತ್ತಾಯಿಸಿದ್ದಾರೆ.



