ಡಿವಿಜಿ ಸುದ್ದಿ, ಚನ್ನಗಿರಿ: ಸ್ವಚ್ಛ ಭಾರತ ಯೋಜನೆಯಡಿ ಪಂಚಾಯಿತಿ ಮಟ್ಟದಲ್ಲಿ ಸಂಗ್ರಹವಾಗುವ ಘನ ತ್ಯಾಜ್ಯವನ್ನು ಸ್ಥಳೀಯವಾಗಿಯೇ ವಿಲೇವಾರಿ ಮಾಡುವ ಸಲುವಾಗಿ ತಾಲೂಕಿನ ಹಿರೇ ಕೋಗಲೂರು ಗ್ರಾಮದಲ್ಲಿ ಘನ ತ್ಯಾಜ್ಯ ನಿರ್ವಹಣಾ ಘಟಕಗಳನ್ನು ನಿರ್ಮಿಸಲು ಸಿದ್ಧತೆ ನಡೆಸಲಾಗಿದೆ ಎಂದು ಜಿಲ್ಲಾ ಪಂಚಾಯತ ಸಂಯೋಜಕ ಬಸವರಾಜಪ್ಪ ತಿಳಿಸಿದರು.

ಶ್ರೀ ತರಳಬಾಳು ಜಗದ್ಗುರು ಸರ್ಕಾರಿ ಪ್ರೌಡಶಾಲೆ ಆವರಣದಲ್ಲಿ ಏರ್ಪಡಿಸಿದ್ದ ತ್ಯಾಜ್ಯ ವಿಲೇವಾರಿ ಘಟಕ ಕಾರ್ಯಗಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ತ್ಯಾಜ್ಯದಿಂದ ಉಂಟಾಗುವ ಕಿರುಚಿತ್ರವನ್ನು ಬಿತ್ತರಿಸಲಾಯಿತು ಹಾಗೂ ಬೀದಿನಾಟಕದ ಮುಖಾಂತರ ಅರಿವು ಮೂಡಿಸಲಾಗುವುದು. ಕಾರ್ಯಕ್ರಮವನ್ನು ಗ್ರಾ.ಪಂ ಪಿಡಿಒ ನಿರೂಪಿಸಿದರು. ಗ್ರಾಪಂ ಅಧ್ಯಕ್ಷೆ ಅನುಭಾಗ್ಯಮ್ಮ ಜಗದೀಶ್ , ಶಂಕರಮ್ಮ , ಮುಖ್ಯೋಪಾಧ್ಯಾಯ ಎಂಬಿ ಪ್ರಭಾಕರ್ , ರುದ್ರೇಶ್ , ಆಶಾ ಕಾರ್ಯಕರ್ತೆಯರು , ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಗ್ರಾಮಸ್ಥರು ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.



