Connect with us

Dvg Suddi-Kannada News

ಚಿಕ್ಕಬಳ್ಳಾಪುರ ಇಂದಿನಿಂದಲೇ ಸಂಪೂರ್ಣ ಸೀಲ್ ಡೌನ್

ಪ್ರಮುಖ ಸುದ್ದಿ

ಚಿಕ್ಕಬಳ್ಳಾಪುರ ಇಂದಿನಿಂದಲೇ ಸಂಪೂರ್ಣ ಸೀಲ್ ಡೌನ್

ಡಿವಿಜಿ ಸುದ್ದಿ, ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದಲೇ ಚಿಕ್ಕಬಳ್ಳಾಪುರ ನಗರವನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗುವುದು  ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ಲತಾ ಹೇಳಿದ್ದಾರೆ

ಜಿಲ್ಲೆಯಲ್ಲಿ ಹೊಸದಾಗಿ ಮೂರು ಕೊರೊನಾ ಕೇಸ್ ಗಳು ದೃಢಪಟ್ಟ ಹಿನ್ನೆಲೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, ನಗರದ 17 ನೇ ವಾರ್ಡಿನಲ್ಲಿ  ಮೃತನಾದ ವೃದ್ಧನ ಮಗ ಹಾಗೂ ಎದುರು ಮನೆಯ ಇಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ಮಾಹಿತಿ ನೀಡಿದರು.

ಮುನ್ನೆಚ್ಚರಿಕೆ ಕ್ರಮವಾಗಿ ವೃದ್ಧ ಮೃತಪಟ್ಟಾಗ 17ನೇ ವಾರ್ಡ್  ಅಕ್ಕ ಪಕ್ಕದ ವಾರ್ಡ್ ಗಳನ್ನು ಮಾತ್ರ ಸೀಲ್‍ಡೌನ್ ಮಾಡಲಾಗಿತ್ತು. ಈಗ ಸೋಂಕಿತರ ಸಂಖ್ಯೆ ಹೆಚ್ಚಳವಾದ ಹಿನ್ನೆಲೆ ಇಡೀ ಚಿಕ್ಕಬಳ್ಳಾಪುರ ನಗರವನ್ನೇ ಸಂಪೂರ್ಣ ಸೀಲ್‍ಡೌನ್ ಮಾಡಲಾಗುತ್ತಿದೆ. ಆಯಾ ವಾರ್ಡುವಾರು ಸ್ವಯಂಸೇವಕರ ಮೂಲಕ ಅಗತ್ಯ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.

ಚಿಕ್ಕಬಳ್ಳಾಪುರ ನಗದ ಜನರು ಅಗತ್ಯ ವಸ್ತುಗಳ ಖರೀದಿ ನೆಪದಲ್ಲಿ ಹೊರಗೆ ಬರುವಂತಿಲ್ಲ. ಜಿಲ್ಲೆಯಲ್ಲಿ ಕೊರೊನಾ ಪೀಡಿತರ ಸಂಖ್ಯೆ 16ಕ್ಕೆ ಏರಿದ್ದು, 8 ಮಂದಿ ಗುಣಮುಖರಾಗಿದ್ದಾರೆ. ಜೊತೆಗೆ ಇಬ್ಬರು ಮೃತಪಟ್ಟಿದ್ದಾರೆ. ಉಳಿದ 06 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದರು.

 

 

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top