Connect with us

Dvg Suddi-Kannada News

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ಡಿವಿಜಿಸುದ್ದಿ.ಕಾಂ, ದಾವಣಗೆರೆ:  ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಹೊರಗುತ್ತಿಗೆ ಆಧಾರದ ಮೇಲೆ  ಮಕ್ಕಳ ರಕ್ಷಣಾಧಿಕಾರಿ ಹುದ್ದೆ ಭರ್ತಿಮಾಡಲು ಆಹ್ವಾನಿಸಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನಿವೃತ್ತ ಅಧಿಕಾರಿಗಳನ್ನು ಒಂದು ವರ್ಷದ ಅವಧಿಗೆ ಅಥವಾ ಸರ್ಕಾರದ ಇಲಾಖೆಯಿಂದ ಈ ಹುದ್ದೆಗೆ ನಿಯಮಾನುಸಾರ ಭರ್ತಿ ಮಾಡುವವರೆಗೆ ಹಾಗೂ ಈ ಹಿಂದೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾಗಿ ಹುದ್ದೆ ನಿರ್ವಹಿಸಿರುವವರಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ಮಾಡಿ ಆದೇಶ ಹೊರಡಿಸಿದೆ.

ಈ ಹುದ್ದೆಗೆ ಮಾಸಿಕ ರೂ.32,800 ವೇತನ ನಿಗದಿಪಡಿಸಿದೆ. ಇದನ್ನು ಹೊರತುಪಡಿಸಿ ಯಾವುದೇ ಭತ್ಯೆಗಳನ್ನು ನೀಡಲಾಗುವುದಿಲ್ಲ. ಅರ್ಜಿಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕುವೆಂಪು ನಗರ, 14ನೇ ಮುಖ್ಯರಸ್ತೆ, ಎಂ.ಸಿ.ಸಿ “ಬಿ” ಬ್ಲಾಕ್, ದಾವಣಗೆರೆ, ದೂ.08191-222700, ಇಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸಲು ಅ.24 ಕಡೆಯ ದಿನವಾಗಿದೆ.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

Advertisement
Advertisement e
Advertisement
To Top