ಡಿವಿಜಿ ಸುದ್ದಿ, ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ಟೌನ್ ಪೊಲೀಸ್ ಠಾಣೆಯ ಎಸ್ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.
ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಗಂಡಸಿ ಹೋಬಳಿಯ ಲಾಳಿನಕೆರೆ ಗ್ರಾಮದವಾರದ ಕಿರಣ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಪೊಲೀಸ್ ಅಧಿಕಾರಿ. ಎರಡು ದಿನದಲ್ಲಿ ಚನ್ನರಾಯಟ್ಟಣದಲ್ಲಿ ಎರಡು ಕೊಲೆ ನಡೆದಿದ್ದು, ಕೊಲೆ ನಡೆದ ಸ್ಥಳಕ್ಕೆ ಹೋಗಿ ಕಿರಣ್ ಕುಮಾರ್ ಪರಿಶೀಲನೆ ನಡೆಸಿದ್ದರು. ಈ ಕೊಲೆಗೆ ಸಂಬಂಧಿದಂತೆ ಆರೋಪಿ ಬಂಧಿಸುವಲ್ಲಿ ರಾಜಕೀಯ ಒತ್ತಡವಿತ್ತು ಎನ್ನಲಾಗುತ್ತಿದೆ.
ವರಮಹಾಲಕ್ಷ್ಮಿ ಹಬ್ಬ ಇದ್ದರಿಂದ ಪತ್ನಿ ತಂದೆ ಮನೆಗೆ ಹೋಗಿದ್ದರು. ಇವರು ಸಹ ಮಾವನ ಮನೆಗೆ ಹೋಗಿ ಬೆಳಗ್ಗೆ ಉಪಹಾರ ತಿಂದು ಬಂದು ತಾವು ವಾಸವಿದ್ದ ಮನೆಯಲ್ಲಿ ಪ್ಯಾನ್‍ಗೆ ನೇಣು ಬಿಗಿದುಕೂಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಯ ಮೃತ ದೇಹವಿದೆ.



