ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಬಿಡಿಎ ವ್ಯಾಪ್ತಿಯ ಕಾರ್ನರ್ ಸೈಟ್‍ಗಳನ್ನು ಹರಾಜು ಹಾಕಲು ತೀರ್ಮಾನಿಸಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಡಿಎ ಕಾರ್ನರ್ ಸೈಟ್ ಮಾರಾಟದಿಂದ 15 ಸಾವಿರ ಕೋಟಿ ಆದಾಯ ಬರುವ ನಿರೀಕ್ಷೆ ಇದೆ. ಒಳ್ಳೆಯ ಬೆಲೆ ಬಂದರೆ ಮಾತ್ರ ಸೈಟ್ ಮಾರಾಟ ಮಾಡುತ್ತೇವೆ ಎಂದು ಮಾಹಿತಿ ನೀಡಿದರು.
ಮುಂದಿನ ವಾರದ ತನಕವೂ ಬಡವರಿಗೆ ಉಚಿತ ಹಾಲು ವಿತರಣೆ ಮಾಡುವುದನ್ನು ಮುಂದುವರಿಸಲಾಗುವುದು. ಅನಧಿಕೃತ ಕಟ್ಟಡಗಳ ಬಗ್ಗೆ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಸೂಚಿಸಲಾಗಿದೆ .
ಯವುದೇ ಕಾರಣಕ್ಕೂ ಸಕ್ಕರೆ ಕಾರ್ಖಾನೆ ಮಾಲೀಕರು ರೈತರಿಗೆ ಕಬ್ಬಿನ ಬಾಕಿ ಹಣ ಉಳಿಸಿಕೊಳ್ಳುವಂತಿಲ್ಲ ಎಂದು ಸೂಚನೆ ಕೊಟ್ಟಿದ್ದೇವೆ. ಅಕಾಲಿಕ ಆನೆಕಲ್ಲು ಮಳೆಯಿಂದ ರಾಜ್ಯದ ಯಾವ ಯಾವ ಭಾಗದಲ್ಲಿ ಭತ್ತದ ಬೆಳೆಗೆ ಹಾನಿಯುಂಟಾಗಿದೆಯೋ ಅದಕ್ಕೆ ಆದಷ್ಟು ಬೇಗ ಪರಿಹಾರ ನೀಡುತ್ತೇವೆ. ಹಾಗೆಯೇ ಆನೆಕಲ್ಲು ಮಳೆಯಿಂದ ಹಾನಿಯಾದ ಬೇರೆ ಬೆಳೆಗಳಿಗೂ ಪರಿಹಾರ ನೀಡಲಾಗುವುದು ಎಂದರು.



