ಡಿವಿಜಿ ಸುದ್ದಿ, ಬೆಂಗಳೂರು: ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರು, ವೀರಶೈವ ಲಿಂಗಾಯ ಸಮಾಜದ ಹಿರಿಯರು, ರಾಜಕೀಯ ಮುತ್ಸದ್ಧಿಗಳು, ಮಾಜಿ ಸಚಿವರು, ನನ್ನ ಆತ್ಮೀಯರೂ ಆಗಿರುವ ಶಾಮನೂರು ಶಿವಶಂಕರಪ್ಪ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಆರ್ಶೀವಾದ ಸದಾ ತಮ್ಮ ಮೇಲಿರಲಿ ಎಂದು ಟ್ವೀಟ್ ಮೂಲಕ ಶುಭಕೋರಿದ್ದಾರೆ.
ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರು, ವೀರಶೈವ ಲಿಂಗಾಯತ ಸಮಾಜದ ಹಿರಿಯರು, ರಾಜಕೀಯ ಮುತ್ಸದ್ದಿಗಳು, ಮಾಜಿ ಸಚಿವರು, ನನ್ನ ಆತ್ಮೀಯರೂ ಆಗಿರುವ ಶ್ರೀಯುತ ಶಾಮನೂರು ಶಿವಶಂಕರಪ್ಪರವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಆಶೀರ್ವಾದ ಸದಾ ತಮ್ಮ ಮೇಲಿರಲಿ. pic.twitter.com/7zREYSnJ8H
— B.S.Yediyurappa (@BSYBJP) June 16, 2020



