Connect with us

Dvgsuddi Kannada | online news portal | Kannada news online

ಹೋಟೆಲ್, ರೆಸ್ಟೋರೆಂಟ್ ತೆರೆಯಲು ಸಿಎಂ ಯಡಿಯೂರಪ್ಪ ಅನುಮತಿ

Home

ಹೋಟೆಲ್, ರೆಸ್ಟೋರೆಂಟ್ ತೆರೆಯಲು ಸಿಎಂ ಯಡಿಯೂರಪ್ಪ ಅನುಮತಿ

ಡಿವಿಜಿ ಸುದ್ದಿ, ಬೆಂಗಳೂರುಕೇಂದ್ರ ಸರ್ಕಾರ ಲಾಕ್ ಡೌನ್ ಸಡಿಲ ಹಿನ್ನೆಲೆ ಮಾರ್ಗಸೂಚಿ ಅನ್ವಯ ರಾಜ್ಯದಲ್ಲಿ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳನ್ನು ತೆರೆಯಲು ಅವಕಾಶ ನೀಡಲಾಗುವುದು. ಕೇಂದ್ರ ಸರ್ಕಾರದ  ಮುನ್ನೆಚ್ಚರಿಕೆ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.

ಪ್ರವಾಸೋದ್ಯಮ ಇಲಾಖೆಯ ಹೋಟೆಲ್‌ಗಳು, ರೆಸ್ಟೋರೆಂಟ್‌ ಮತ್ತು ಪ್ರವಾಸಿ ತಾಣಗಳನ್ನು ತೆರೆಯಲು ಮಾರ್ಗಸೂಚಿಗಳ ಕೈಪಿಡಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. ಸರ್ಕಾರದ ಮಾರ್ಗಸೂಚಿಯಂತೆ ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳನ್ನು ತೆರೆಯುವುದಾಗಿ ಹೋಟೆಲ್‌ಗಳ ಸಂಘದ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದರು.

ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರುತಿ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.

ಸಭೆಯಲ್ಲಿ ‌ಭಾಗವಹಿಸಿದ್ದ ಬಸ್ ಮಾಲೀಕರ ಸಂಘ, ಹೋಟೆಲ್ ಮಾಲೀಕರ‌ ಸಂಘ ಮತ್ತು ಟ್ಯಾಕ್ಸಿ ಮಾಲೀಕರ‌ ಸಂಘದ ಪ್ರತಿನಿಧಿಗಳು, ಸರ್ಕಾರದ ಮುಂದೆ‌ ಕೆಲವು ಬೇಡಿಕೆಗಳನ್ನು‌ ಮುಂದಿಟ್ಟರು. ಈ ಬೇಡಿಕೆಗಳನ್ನು ಪರಿಶೀಲಿಸಿ, ತೀರ್ಮಾನ ಕೈಗೊಳ್ಳುವುದಾಗಿ ಸಿಎಂ ತಿಳಿಸಿದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in Home

ದಾವಣಗೆರೆ

Advertisement
Advertisement Enter ad code here

Title

To Top