ಡಿವಿಜಿ ಸುದ್ದಿ, ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಸಂಜೆ 4 ಗಂಟೆಗೆ ರಾಜ್ಯದ ಜನರನ್ನು ಉದ್ದೇಶಿಸಿ ಮಾತನಾಡಲಿದ್ದು, ಯೂಟ್ಯೂಬ್ ಮತ್ತು ಫೇಸ್‌ಬುಕ್ ಲೈವ್ ಮುಖಾಂತರ ಮಾತನಾಡಲಿದ್ದಾರೆ.
ಕೊರೊನಾ ವೈರಸ್ ತಡೆಗಟ್ಟಲು ಮುಂದಿನ ಕ್ರಮಗಳ ಕುರಿತು ಮಾತನಾಡುವ ಸಾಧ್ಯತೆ ಇದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಿಧಿಸಲಾಗಿದ್ದ 7 ದಿನಗಳ ಲಾಕ್‌ಡೌನ ಇಂದು ಅಂತ್ಯವಾಗಲಿದ್ದು, ಮುಂದಿನ ನಿರ್ಧಾರ ಗಳ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ.
ಬೆಂಗಳೂರು ನಗರ ಕೋವಿಡ್ ಹಾಟ್‌ಸ್ಪಾಟ್ ಆಗಿದ್ದು, ಇದರನ್ನು ಎದುರಾಗಿರುವ ಕುರಿತು ಜನತೆ ಉದ್ದೇಶಿಸಿ ಮಾತನಾಡಲಿದ್ದಾರೆ. ಕೊರೊನಾ ವಿಚಾರಗಳನ್ನು ಮಾಧ್ಯಮಗಳ ಮೂಲಕವೇ ಪ್ರಕಟಿಸುತ್ತಿದ್ದ ಯಡಿಯೂರಪ್ಪ ಅವರು ಇದೇ ಮೊದಲ ಬಾರಿಗೆ ನೇರವಾಗಿ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.



