Connect with us

Dvgsuddi Kannada | online news portal | Kannada news online

ಉತ್ತರ ಕರ್ನಾಟಕ ನೀರಾವರಿ ಯೋಜನೆಗೆ ಸಾವಿರ ಕೋಟಿ ಮೀಸಲು:ಸಿಎಂ ಬಿ.ಎಸ್ . ಯಡಿಯೂರಪ್ಪ

ರಾಜ್ಯ ಸುದ್ದಿ

ಉತ್ತರ ಕರ್ನಾಟಕ ನೀರಾವರಿ ಯೋಜನೆಗೆ ಸಾವಿರ ಕೋಟಿ ಮೀಸಲು:ಸಿಎಂ ಬಿ.ಎಸ್ . ಯಡಿಯೂರಪ್ಪ

ಡಿವಿಜಿ ಸುದ್ದಿ, ಹುಬ್ಬಳ್ಳಿ: ನವಲಗುಂದ, ನರಗುಂದ ಸೇರಿದಂತೆ ಉತ್ತರ ಕರ್ನಾಟಕ ನೀರಾವರಿ ಯೋಜನೆಗಳಿಗೆ ಸಾವಿರ ಕೋಟಿ ರೂಪಾಯಿಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

ಧಾರವಾಡ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂ ಪೂಜೆ ನೆರವೇರಿಸುವ ಸಲುವಾಗಿ, ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಒಂದಾದ ನಂತರ ಒಂದು ಯೋಜನೆಗಳನ್ನು ಪೂರ್ಣಗೊಳಿಸಲಾಗುವುದು. ಬೆಳೆಗಳಿಗೆ ವೈಜ್ಞಾನಿಕ ಬೆಲೆ ದೊರಕುವಂತೆ ಮಾಡುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು  ಎಂದರು.

ವಿಜೇತರಿಗೆ ಸಚಿವ ಸ್ಥಾನ

ಉಪಚುನಾವಣೆಯಲ್ಲಿ ಆಡಳಿತ ಪಕ್ಷಕ್ಕೆ 12 ಸ್ಥಾನಗಳಲ್ಲಿ ಗೆಲುವು ದೊರೆತಿರುವುದು, ಯಾವುದೇ ಅಡ್ಡಿ ಆತಂಕ ಇಲ್ಲದೆ ಮೂರುವರೆ ವರ್ಷಗಳ ಕಾಲ ಆಡಳಿತ ನೀಡಲು ಅವಕಾಶ ಕಲ್ಪಿಸಿದೆ. ಇನ್ನೂ ಆರು ತಿಂಗಳಲ್ಲಿ ರಾಜ್ಯದಲ್ಲಿ ಅಭಿವೃದ್ಧಿಯ ಬದಲಾವಣೆ ಮಾಡಲಿದ್ದೇವೆ. ಡಿಸೆಂಬರ್ ತಿಂಗಳ ಅಂತ್ಯದಲ್ಲಿ ದೆಹಲಿಗೆ ತೆರಳಿ ಪಕ್ಷದ ಅಧ್ಯಕ್ಷರು ಹಾಗೂ ಪ್ರಧಾನಿಗಳನ್ನು ಭೇಟಿಯಾಗಿ ಚರ್ಚಿಸಿದ ನಂತರ, ಪಕ್ಷವನ್ನು ಬೆಂಬಲಿಸಿ ಚುನಾವಣೆಯಲ್ಲಿ ವಿಜೇತರಾದ ಎಲ್ಲರಿಗೂ ಸಚಿವ ಸ್ಥಾನ ನೀಡಲಾಗುವುದು ಎಂದು ತಿಳಿಸಿದರು.

ಜ. 2 ರಂದು ಪ್ರಧಾನಿ ರಾಜ್ಯಕ್ಕೆ ಭೇಟಿ

ಪ್ರಧಾನ ಮಂತ್ರಿ ಅವರು ಜನವರಿ 2 ರಂದು ರಾಜ್ಯಕ್ಕೆ ಆಗಮಿಸಲಿದ್ದು, ಜನವರಿ 3 ರಂದು ಬೃಹತ್ ಸಮಾವೇಶವನ್ನು ಏರ್ಪಡಿಸಿ ಸಚಿವ ಸಂಪುಟ ವಿಸ್ತರಣೆ ಮಾಡುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿಗಳ ಕಾರ್ಯಾಲಯದೊಂದಿಗೆ ಚರ್ಚೆ ನಡೆಸಲಾಗುತ್ತಿದೆ. ಮಹಾದಾಯಿ ಹೋರಾಟ ಬಹುದಿನಗಳದ್ದು, ಗೋವಾ ಹಾಗೂ ಕೇಂದ್ರ ಸರ್ಕಾರದೊಂದಿಗೆ ಮಾತನಾಡಿ ಆದಷ್ಟೂ ಬೇಗ ಸಮಸ್ಯೆ ಪರಿಹರಿಸಲಾಗುವುದು ಎಂದು ಹೇಳಿದರು.

ನಿರ್ಭಯಾ ಪ್ರಕರಣದ ತೀರ್ಪಿಗೆ ಸ್ವಾಗತ

ನಿರ್ಭಯ ಪ್ರಕರಣದ ಅತ್ಯಾಚಾರಿಗಳಿಗೆ ಸರ್ವೋಚ್ಚ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿರುವುದನ್ನು ಮುಖ್ಯಮಂತ್ರಿಗಳು ಸ್ವಾಗತಿಸಿದ್ದಾರೆ. ತ್ವರಿತವಾಗಿ ಘಟನೆಯ ಬಗ್ಗೆ ನ್ಯಾಯಾಲಯ ತೀರ್ಪು ನೀಡಿರುವುದು. ಈ ತರಹದ ಕೃತ್ಯಗಳಲ್ಲಿ ಪಾಲ್ಗೊಳ್ಳುವರಿಗೆ ಎಚ್ಚರಿಕೆ ಗಂಟೆಯಾಗಿದೆ ಎಂದು ಹೇಳಿದರು.

ಉಪ ಮುಖ್ಯ ಮಂತ್ರಿ ಗೋವಿಂದ ಎಂ .ಕಾರಜೋಳ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಗಣಿ ಮತ್ತು ವಿಜ್ಞಾನ ಹಾಗೂ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಸಿ.ಸಿ.ಪಾಟೀಲ್ ಸೇರಿದಂತೆ ಮತ್ತಿತ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಜ್ಯ ಸುದ್ದಿ

To Top