ಡಿವಿಜಿ ಸುದ್ದಿ, ದಾವಣಗೆರೆ: ರಾಜ್ಯದಲ್ಲಿ ಲಾಕ್‍ಡೌನ್ ನಿಯಮ ಉಲ್ಲಂಘಿಸಿದ 57,633 ವಾಹನಗಳು ಸೀಜ್ ಮಾಡಲಾಗಿದ್ದು, 2181 ಜನರ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದವರ ಮೇಲೆ 85 ಲಕ್ಷ ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಇಂದಿನಿಂದ ಮತ್ತಷ್ಟು ನಿಯಮ ಬಿಗಿಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
ಕೃಷಿ, ಅಗತ್ಯ ವಸ್ತುಗಳ ಪೂರೈಕೆಯಲ್ಲಿ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಲಾಗುವುದು. ಮದ್ಯದಂಗಡಿ, ಸರ್ಕಾರಿ ಕಚೇರಿ ಒಪನ್ ಕುರಿತು ಕೇಂದ್ರ ಸರ್ಕಾರದ ಮಾರ್ಗಸೂಚಿ ಬಂದ ಮೇಲೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.



