ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಹೋಟೆಲ್ ಆರಂಭಿಸಲು ಅನುಮತಿ ನೀಡುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವುದಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದರು.
ವಿಧಾನ ಸೌಧದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳನ್ನು ಪ್ರಾರಂಭಿಸಬೇಕು ಎಂಬ ಒತ್ತಡ ಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಲಾಕ್‌ಡೌನ್ ಸಡಿಲಗೊಳಿಸಿದ ನಂತರ ಸಾಕಷ್ಟು ಜನ ರಾಜ್ಯಕ್ಕೆ ಬರುತ್ತಿದ್ದಾರೆ. ಅವರಿಗೆ ಊಟ ಮತ್ತು ಉಪಾಹಾರಕ್ಕಾಗಿ ಹೋಟೆಲುಗಳ ಅಗತ್ಯವಿದೆ. ಕೇಂದ್ರ ಸರ್ಕಾರ ಒಪ್ಪಿಗೆಗೆ ಕಾಯುತ್ತಿದ್ದೇವೆ ಎಂದರು.
ಜೂನ್ 1ರಿಂದ ದೇವಸ್ಥಾನ ಓಪನ್
ಜೂನ್ 1ರಿಂದ ದೇವಸ್ಥಾನ, ಮಸೀದಿ, ಚರ್ಚ್‌ಗಳನ್ನು ತೆರೆಯಲು ಅವಕಾಶ ನೀಡಲಾಗುವುದು. ದೇವಸ್ಥಾನಗಳನ್ನು ತೆರೆಯಲು ಅನುಮತಿ ನೀಡಿದರೆ, ಚರ್ಚ್ ಮತ್ತು ಮಸೀದಿಗಳಿಗೂ ಅದೇ ನೀತಿ ಅನ್ವಯ ಆಗುತ್ತದೆ ಎಂದರು.



