ಡಿವಿಜಿ ಸುದ್ದಿ, ಬಾಗಲಕೋಟೆ: ಇಡೀ ದೇಶದಲ್ಲಿ ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಿಂದ ಸಂಚರಿಸುವ ಎಲ್ಲಾ ಬಸ್ ಸೇವೆಯನ್ನು ರದ್ದುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಹೊರ ದೇಶದಿಂದ ಬರುವವರ ಸಂಖ್ಯೆ ಹೆಚ್ಚು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯಿಂದ ಮುಂಬೈ ಹಾಗೂ ಪುಣೆಗೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.
ಬಾದಾಮಿ, ಬಾಗಲಕೋಟೆ, ಇಳಕಲ್, ಜಮಖಂಡಿ, ಮುಧೋಳ ಘಟಕಗಳಿಂದ ಪ್ರತಿನಿತ್ಯ ಮುಂಬೈ ಹಾಗೂ ಪುಣೆಗೆ ತೆರಳುವ ಐದು ಐಷಾರಾಮಿ ಬಸ್ ಗಳ ಸಂಚಾರವನ್ನು ಅನಿರ್ದಿಷ್ಟ ಅವಧಿಗೆ ಸ್ಥಗಿತಗೊಳಿಸಲಾಗಿದೆ. ಮುಂದಿನ ಪರಿಸ್ಥಿತಿ ನೋಡಿಕೊಂಡು ಸೇವೆ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.



