ಡಿವಿಜಿ ಸುದ್ದಿ, ಹರಪನಹಳ್ಳಿ: ತಾಲ್ಲೂಕಿನ ಉಚ್ಚoಗಿದುರ್ಗದಲ್ಲಿ ಆಶಾ ಕಾರ್ಯಕರ್ತರು, ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಾಯಕಿಯರು ಗ್ರಾಮದಲ್ಲಿನ ಅಂಗಡಿಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಿದರು. ಅಂಗಡಿ ಮಾಲೀಕರು, ಗ್ರಾಹಕರಿಗೆ ಮಾಸ್ಕ್ ಹಾಕಿ ಕೊಳ್ಳುವಂತೆ ಜಾಗೃತಿ ಮೂಡಿಸಿದರು. ಮಾಸ್ಕ್ ಲಭ್ಯವಿಲ್ಲದಿದ್ದರೆ ಕರವಸ್ತ್ರ ಕಟ್ಟಿಕೊಳ್ಳುವುದು. ಕೈಗಳನ್ನು ತೊಳೆದುಕೊಳ್ಳುವಂತೆ ಗ್ರಾಮದಲ್ಲಿ ಕರಪತ್ರ ಹಂಚಿ ಅರಿವು ಮೂಡಿಸಿದರು.

ಕೊರೊನ ರೋಗದಿಂದ ಮುಕ್ತಿ ಹೊಂದಲು ಕೆಲವು ದಿನ ಮನೆಯಲ್ಲಿ ಇರಬೇಕು. ಜೊತೆಗೆ ನಿಮ್ಮ ಸುತ್ತ ಮುತ್ತ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಸೂಚಿಸಿದರು. ಆಶಾ ಕಾರ್ಯಕರ್ತರಾದ ಶಿಲ್ಪಾ, ಸುಮಾ, ಕೊಟ್ರಮ್ಮ,ಪ್ರಾಥಮಿಕ ಆರೋಗ್ಯ ಕೇಂದ್ರದ ಮಹಿಳಾ ಆರೋಗ್ಯ ಸಹಾಯಕಿ ಮಂಜುಳಾ ಭಾಗವಹಿಸಿದ್ದರು.
ವಾಟ್ಸಾಪ್ : 7483892205
ಇಮೇಲ್: dvgsuddi@gmail.com



