ಡಿವಿಜಿ ಸುದ್ದಿ, ದಾವಣಗೆರೆ: ತೀವ್ರ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಪೌರಕಾರ್ಮಿಕನಿಗೆ ಸೂಕ್ತ ಚಿಕಿತ್ಸೆ ಸಿಗದೇ ಮೃತಪಟ್ಟಿದ್ದಾರೆ.
ಗಾಂಧಿನಗರದ ಕುಮಾರ್ (35) ಮೃತಪಟ್ಟ ವ್ಯಕ್ತಿಯಾಗಿದ್ದು, ವಾರದ ಹಿಂದೆ ಇವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಚಿಕಿತ್ಸೆ ಪಡೆದು ಮನೆಯಲ್ಲಿ ಇದ್ದರು. ಮತ್ತೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ನಗರದ ಖಾಸಗಿ ಆಸ್ಪತ್ರೆಗೆ ಹೋಗಿದ್ದಾರೆ. ಆದರೆ, ಯಾವ ಆಸ್ಪತ್ರೆಯಲ್ಲಿ ಕೂಡ ಬೆಡ್ ಖಾಲಿ ಇಲ್ಲ ಎಂದು ಹೇಳಿದ್ದಾರೆ.
ಕೊನೆಗೆ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಬಂದಿದ್ದಾರೆ. ಅಲ್ಲಿ ಕೂಡ ಬೆಡ್‌ಗಳು ಖಾಲಿ ಇಲ್ಲ ಎಂದಾಗ ಪೌರಕಾರ್ಮಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಉಚ್ಚೆಂಗೆಪ್ಪ ಅವರು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರಿಗೆ ದೂರವಾಣಿ ಮೂಲಕ ಮನವಿ ನಂತರ ಬೆಡ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.



