ಡಿವಿಜಿ ಸುದ್ದಿ, ಬೆಂಗಳೂರು: ಇಂದು ರಾಜ್ಯದಲ್ಲಿ 63 ಹೊಸ ಕೊರೊನಾ ಪ್ರಕರಣಗಳು ಬೆಳಕಿಗೆ ಬಂದಿದ್ದು, ಸೋಂಕಿತರ ಸಂಖ್ಯೆ 1458ಕ್ಕೆ ಏರಿಕೆಯಾಗಿದೆ.
ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ಇಂದು ಕೊರೊನಾದಿಂದ 10 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1458 ಸೋಂಕಿರಲ್ಲಿ ಇದುವರೆಗೂ 553 ಮಂದಿ ಗುಣಮುಖರಾದಂತಾಗಿದೆ. ರಾಜ್ಯದಲ್ಲಿ ಒಟ್ಟು 40 ಜನ ಮೃತಪಟ್ಟಿದ್ದು, 864 ಸಕ್ರಿಯ ಕೊರೊನಾ ಪ್ರಕರಣಗಳಿವೆ.
ಇಂದಿನ ವರದಿಯಲ್ಲಿ ಬೆಂಗಳೂರು 4, ಮಂಡ್ಯ 8, ಕಲಬುರಗಿ 7, ಬೀದರ್ 10, ಉತ್ತರ ಕನ್ನಡ 1, ಹಾಸನ 21, ತುಮಕೂರು 4, ಯಾದಗಿರಿ ಒಂದು ಪ್ರಕರಣಗಳು ಬೆಳಕಿಗೆ ಬಂದಿದೆ. ಈವರೆಗೆ ಸೋಂಕಿತರ ಟ್ರಾವಲ್ ಹಿಸ್ಟರಿ ನೀಡಲಾಗುತ್ತಿತ್ತು. ಆದರೆ, ಇಂದು ಸೋಂಕು ಮೂಲದ ಮಾಹಿತಿಯನ್ನು ಆರೋಗ್ಯ ಇಲಾಖೆ ಬಹಿರಂಗಪಡಿಸಿಲ್ಲ.



