ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಮತ್ತೆ ತನ್ನ ಅಬ್ಬರ ಮುಂದುವರಿಸಿದ್ದು, ಇಂದು ಬರೋಬ್ಬರಿ 337 ಪಾಸಿಟಿವ್ ಬಂದಿದ್ದು, 10 ಮಂದಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8,281ಕ್ಕೆ ಏರಿಕೆಯಾಗಿದೆ. ಇನ್ನು ಸಾವಿನ ಸಂಖ್ಯೆ 124ಕ್ಕೆ ಏರಿಕೆಯಾಗಿದೆ. 5,210 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಸದ್ಯ 2,943 ಪ್ರಕರಣಗಳು ಸಕ್ರಿಯವಾಗಿವೆ.
ಇಂದು ಬೆಂಗಳೂರು ನಗರ ಒಂದರೆಲ್ಲಿಯೇ 138 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 982ಕ್ಕೆ ತಲುಪಿದೆ. ಇನ್ನು ಕಲಬುರಗಿಯಲ್ಲಿ 52, ಬಳ್ಳಾರಿಯಲ್ಲಿ 37, ಹಾಸನದಲ್ಲಿ 18, ದಕ್ಷಿಣ ಕನ್ನಡದಲ್ಲಿ 13, ದಾವಣಗೆರೆಯಲ್ಲಿ 12, ಉಡುಪಿಯಲ್ಲಿ 11, ಬೀದರ್‌ನಲ್ಲಿ 10, ಮೈಸೂರು ಹಾಗೂ ಕೊಪ್ಪಳದಲ್ಲಿ ತಲಾ 6 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಸಂಜೆಯ ಪತ್ರಿಕಾ ಪ್ರಕಟಣೆ 19/06/2020.
ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಕೆಳಗೆ ಈ ಲಿಂಕನ್ನು ಕ್ಲಿಕ್ ಮಾಡಿ.https://t.co/zscRIlpDxz@BMTC_BENGALURU @NammaBESCOM @tv9kannada @publictvnews @suvarnanewstv @timesofindia @prajavani @udayavani_web @TV5kannada @Vijaykarnataka @VVani4U pic.twitter.com/33bqqzJBBc— Karnataka Health Department (@DHFWKA) June 19, 2020



