ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿಂದು 453 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಐವರು ಮೃತಪಟ್ಟಿದ್ದಾರೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಒಟ್ಟು 9,150 ಮಂದಿಗೆ ಸೋಂಕು ತಗುಲಿದೆ. ಇದುವರೆಗೂ 137 ಮಂದಿ ಮೃತಪಟ್ಟಿದ್ದಾರೆ. 5,618 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 3,391 ಸಕ್ರಿಯ ಪ್ರಕರಣಳಿವೆ. ಇದರಲ್ಲಿ 77 ಜನರಿಗೆ ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು ನಗರ 196, ಬಳ್ಳಾರಿ 40, ಕಲಬುರಗಿ 39, ವಿಜಯಪುರ 39, ಮೈಸೂರು 18, ಗದಗ 18, ಧಾರವಾಡ 15, ಬಾಗಲಕೋಟೆ 14, ಬೀದರ್ 13, ದಾವಣಗೆರೆ 8, ಉತ್ತರ ಕನ್ನಡ 8, ಕೋಲಾರ 8, ದಕ್ಷಿಣ ಕನ್ನಡ 8, ಮಂಡ್ಯ 5, ಹಾಸನ 5, ತುಮಕೂರು 4, ಯಾದಗಿರಿ 3, ಚಿಕ್ಕಬಳ್ಳಾಪುರ 3, ಹಾವೇರಿ 3, ರಾಯಚೂರು 2, ಶಿವಮೊಗ್ಗ 2, ರಾಮನಗರ 2 ಮತ್ತು ಚಿಕ್ಕಮಗಳೂರಿನಲ್ಲಿ 1 ಕೊರೊನಾ ಪಾಸಿಟಿವ್ ಪತ್ತೆಯಾಗಿವೆ.
ಸಂಜೆಯ ಪತ್ರಿಕಾ ಪ್ರಕಟಣೆ 21/06/2020.
ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಕೆಳಗೆ ಈ ಲಿಂಕನ್ನು ಕ್ಲಿಕ್ ಮಾಡಿ.https://t.co/EIl5BXqx4F@CMofKarnataka @BSYBJP @DVSadanandGowda @SureshAngadi_ @sriramulubjp @drashwathcn @BSBommai @mla_sudhakar @iaspankajpandey @Tejasvi_Surya @BBMP_MAYOR @BBMPCOMM pic.twitter.com/gODF3DKJuR— Karnataka Health Department (@DHFWKA) June 21, 2020



