Connect with us

Dvgsuddi Kannada | online news portal | Kannada news online

ಕೊರೊನಾ ಭೀತಿ: ಕಲಬುರಗಿಯಲ್ಲಿ ಖಾಸಗಿ ಬಸ್ ಸೇವೆ ಸಂಪೂರ್ಣ ಬಂದ್

ಪ್ರಮುಖ ಸುದ್ದಿ

ಕೊರೊನಾ ಭೀತಿ: ಕಲಬುರಗಿಯಲ್ಲಿ ಖಾಸಗಿ ಬಸ್ ಸೇವೆ ಸಂಪೂರ್ಣ ಬಂದ್

  ಡಿವಿಜಿ ಸುದ್ದಿ, ಕಲಬುರಗಿ: ಕೊರೊನಾ ಸೋಂಕು ಇಡೀ ದೇಶವೇ ತತ್ತರಿಸಿ ಹೋಗಿದೆ.  ದೇಶದಲ್ಲಿಯೇ ಮೊದಲ ಬಲಿ ಪಡೆದ ಕಲಬುರಗಿಯಲ್ಲಿ ಕೊರೊನಾ ಭೀತಿ ಇನ್ನಷ್ಟು  ಹೆಚ್ಚಿದೆ. ಈ ಹಿನ್ನೆಲೆಯಲ್ಲಿ  ಖಾಸಗಿ ಬಸ್ ಸೇವೆಯನ್ನು ಇಂದಿನನಿಂದಲ್ಲೇ ಸಂಪೂರ್ಣವಾಗಿ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಬಿ. ಶರತ್ ಸೂಚನೆ ನೀಡಿದ್ದಾರೆ.

ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶಕ್ಕೆ ತೆರಳುವ ಬಸ್ ಗಳ ಮೂಲಕ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ. ಈ ಹಿನ್ನೆಲೆ ಖಾಸಗಿ ಬಸ್ ಸೇವೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಸರ್ಕಾರದ ಮುಂದಿನ ಆದೇಶ ಬರುವವರೆಗೂ ಜಿಲ್ಲೆಯಿಂದ ಯಾವುದೇ ಖಾಸಗಿ ಬಸ್ ಸೇವೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಖಾಸಗಿ ಬಸ್ ಮಾಲೀಕರ ಸಭೆ ಬಳಿಕ ತಿಳಿಸಿದರು.

ಈಗಾಗಲೇ ಬಕ್ಕಿಂಗ್ ಮಾಡಿದವರಿಗೆ ಹಣ ವಾಪಸ್ಸು ನೀಡುವಂತೆ ಸೂಚಿಸಲಾಗಿದೆ. ಸರ್ಕಾರಿ ಬಸ್ ಸೇವೆ ಹೊರತುಪಡಿಸಿ ಎಲ್ಲಾ ಖಾಸಗಿ ಬಸ್ ಸೇವೆಯನ್ನು ರದ್ದುಗೊಳಿಸಲಾಗಿದೆ. ಈ ಮೂಲಕ ಕಲಬುರಗಿ ಸಂಪೂರ್ಣವಾಗಿ ಬಂದ್ ಆಗಲಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top