ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಮತ್ತೆ 327 ಕೊರೊನಾ ಪಾಸಿಟಿವ್ ಕೇಸ್ ಗಳು ದಾಖಲಾಗಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಐದು ಸಾವಿರ ಗಡಿದಾಟಿದೆ.
ಜಿಲ್ಲೆಯಲ್ಲಿಂದು 267 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 5,070 ಮಂದಿಯಲ್ಲಿ 3421ಮಂದಿ ಗುಣಮುಖರಾಗಿದ್ದಾರೆ. ಇಂದು 05 ಮಂದಿ ಕೊರೊನಾದಿಂದ ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಮೃತರ ಸಂಖ್ಯೆ 126ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇನ್ನು 1,523 ಸಕ್ರಿಯ ಪ್ರಕಣಗಳಿವೆ.
ಇಂದು ಪತ್ತೆಯಾದ ಪಾಸಿಟಿವ್ ಪ್ರಕರಣಗಳಲ್ಲಿ ದಾವಣಗೆರೆಯಲ್ಲಿ ಅಧಿಕ 182, ಹರಿಹರ 73,ಜಗಳೂರು 07,ಚನ್ನಗಿರಿ 26, ಹೊನ್ನಾಳಿ 26 ಹಾಗೂ ಹೊರ ಜಿಲ್ಲೆಯ 13 ಮಂದಿಗೆ ಕೊರೊನಾ ಪತ್ತೆಯಾಗಿದೆ.



