ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ಸೋಂಕು ಹರಡುವುದನ್ನು ತಡೆಯಲು ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ವಾರ ಲಾಕ್‌ಡೌನ್ ಘೋಷಣೆ ಮಾಡಿದ ಬೆನ್ನಲ್ಲೇ, ನಗರದಲ್ಲಿ ನೆಲೆಸಿರುವ ಜನರು ಕುಟುಂಬ ಸಮೇತವಾಗಿ ತಮ್ಮೂರಿನತ್ತ ಹೊರಟಿದ್ದಾರೆ.
ಕಾರ್ಮಿಕರು ಹಾಗೂ ಉದ್ಯೋಗಸ್ಥರು ಕುಟುಂಬ ಸಮೇತರಾಗಿ ಮನೆ ಖಾಲಿ ಮಾಡಿಕೊಂಡು ಬಸ್ ಹಾಗೂ ಖಾಸಗಿ ವಾಹನಗಳ ಇಂದು ಬೆಳಿಗ್ಗೆಯಿಂದಲೇ ತಮ್ಮ ಊರಿನ ಕಡೆ ಪ್ರಯಾಣ ಬೆಳೆಸುತ್ತಿದ್ದಾರೆ.
ಮೆಜೆಸ್ಟಿಕ್ , ಸ್ಯಾಟ್‌ಲೈಟ್ ಬಸ್ ನಿಲ್ದಾಣದಲ್ಲಿ ಭಾರೀ ಸಂಖ್ಯೆಯಲ್ಲಿ ಜಮಾಯಿಸಿರುವ ಪ್ರಯಾಣಿಕರು, ಗಂಟುಮೂಟೆ ಸಮೇತ ಊರಿಗೆ ಹೊರಟಿದ್ದಾರೆ. ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಬೀದರ್, ಬಳ್ಳಾರಿ, ಕಲಬುರ್ಗಿ, ಕೊಪ್ಪಳ, ಹೊಸಪೇಟೆ ಹೀಗೆ ವಿವಿಧ ಜಿಲ್ಲೆಯಿಂದ ಬಂದು ಬೆಂಗಳೂರಲ್ಲಿ ನೆಲೆ ಕಂಡುಕೊಂಡವರು. ಮತ್ತೆ ತಮ್ಮ ಊರಿನ ಕಡೆ ಪ್ರಯಾಣ ಬೆಳೆಸುತ್ತಿದ್ದಾರೆ.

ಸೋಮವಾರ ಬೆಳಿಗ್ಗೆಯಿಂದಲೇ ಬಸ್‌ಗಳ ಸಂಚಾರ ಆರಂಭವಾಗಿದ್ದು, ತುಮಕೂರು ರಸ್ತೆಯ ನೆಲಮಂಗಲ ಟೋಲ್ ಗೇಟ್‌ನಲ್ಲಿ ಭಾರೀ ವಾಹನ ಸಂಚಾರ ದಟ್ಟಣೆ ಉಂಟಾಗಿದೆ. ಒಂದು ವಾರದ ಲಾಕ್ ಡೌನ್ ಮುಂದುವರಿಯುವ ಸಾಧ್ಯತೆ ಹೆಚ್ಚಿರುವ ಹಿನ್ನೆಲೆ ಕುಟುಂಬ ಸಮೇತರಾಗಿ ಬೆಂಗಳೂರು ತೊರೆಯುತ್ತಿದ್ದಾರೆ. ನಗರದ ತುಮಕೂರು ರಸ್ತೆ ಹಾಗೂ ಮೈಸೂರು ರಸ್ತೆಯಲ್ಲಿ ವಿಪರೀತ ಸಂಚಾರ ದಟ್ಟಣೆ ಉಂಟಾಗಿದೆ.
ಮೆಜೆಸ್ಟಿಕ್‌ನಿಂದ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಹೆಚ್ಚಿನ ಬಸ್ ಬಿಡಲಾಗಿದೆ. ಯಶವಂತಪುರ, ಪೀಣ್ಯ, ಜಾಲಹಳ್ಳಿ ಹಾಗೂ ನೆಲಮಂಗಲ ಭಾರೀ ಟ್ರಾಫಿಕ್ ಜಾಮ್. ಸೋಮವಾರ ಮತ್ತು ಮಂಗಳವಾರ ತಲಾ 800 ಬಸ್ಸುಗಳನ್ನು ಬೆಂಗಳೂರಿನಿಂದ ರಾಜ್ಯದ ಇತರೆ ಸ್ಥಳಗಳಿಗೆ ಹೆಚ್ಚುವರಿಯಾಗಿ ಕಾರ್ಯಚರಣೆ ಮಾಡಲು ಕೆಎಸ್ಆರ್‌ಟಿಸಿ ಮುಂದಾಗಿದೆ.
ಸಾಮಾಜಿಕ ಅಂತರ ಕಾಪಾಡಿಕೊಂಡು. ಪ್ರತಿಯೊಬ್ಬ ಪ್ರಯಾಣಿಕರಿಗೂ ಥರ್ಮಲ್ ಸ್ಕ್ರೀನಿಂಗ್ ಮಾಡಿ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗುತ್ತಿದೆ ಎಂದು ಕೆಎಸ್ಆರ್‌ಟಿಸಿ ತಿಳಿಸಿದೆ.



