ಡಿವಿಜಿ ಸುದ್ದಿ, ಚಿಕ್ಕಬಳ್ಳಾಪುರ: ಡೆಡ್ಲಿ ಕೊರೊನಾ ವೈರಸ್‍ಗೆ ಚಿಕ್ಕಬಳ್ಳಾಪುರ ನಗರದ ನಿವಾಸಿ 65 ವರ್ಷದ ವೃದ್ಧ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ ಎರಡನೇ ಪ್ರಕರಣವಾಗಿದೆ. ಈ ಮೊದಲು ಗೌರಿಬಿದನೂರಿನ 70 ವರ್ಷದ ವೃದ್ಧೆ ಕೊರೊನಾ ವೈರಸ್‍ನಿಂದ ಮೃತಪಟ್ಟಿದರಿ. ಇದೀಗ ಚಿಕ್ಕಬಳ್ಳಾಪುರ ನಗರದ 65 ವರ್ಷದ ವೃದ್ಧ ಮೃತಪಟ್ಟಿದ್ದಾನೆ. ವೃದ್ಧ ಅಸ್ತಮಾ, ಬಿಪಿ, ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದರು.
ಚಿಕ್ಕಬಳ್ಳಾಪುರದ 69 ವರ್ಷದ ವ್ಯಕ್ತಿಯೊಬ್ಬರು #COVID19 ಸೋಂಕಿನಿಂದ ಮೃತಪಟ್ಟಿದ್ದಾರೆ. ಪಾರ್ಥಿವ ಶರೀರವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇಡಲಾಗಿದ್ದು, ಕೇಂದ್ರ ಸರ್ಕಾರದ ನಿಯಮಗಳ ಪ್ರಕಾರ ಅಂತ್ಯಕ್ರಿಯೆಗೆ ಇಲಾಖೆಯು ಸಿದ್ಧತೆ ನಡೆಸುತ್ತಿದೆ. ದಯಮಾಡಿ ಸಾರ್ವಜನಿಕರು ಮನೆಯಲ್ಲೇ ಸುರಕ್ಷಿತವಾಗಿರಬೇಕು ಎಂದು ವಿನಂತಿಸುತ್ತೇನೆ
— B Sriramulu (@sriramulubjp) April 15, 2020
ಏಪ್ರಿಲ್ 08ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು.ಇಂದು ಸೋಂಕಿತ ವೃದ್ಧ ಮೃತಪಟ್ಟಿದ್ದಾನೆ.

ಈತ ಯಾವುದೇ ದೇಶಕ್ಕೆ ಹೋಗಿ ಬಂದಿಲ್ಲ. ಕೊರೊನಾ ಸೋಂಕಿತ ಪ್ರದೇಶಗಳಿಗೆ ಹೋಗಿ ಬಂದ ಹಿಸ್ಟರಿ ಕೂಡ ಇಲ್ಲ. ಆದರೂ ಕೊರೊನಾ ಹೇಗೆ ಬಂದಿದೆ . ಇದು ವೈದ್ಯರಿಗೆ ಯಕ್ಷ ಪ್ರಶ್ನೆಯಾಗಿದ್ದು, ವೈರಸ್ ಮೂಲ ಪತ್ತೆ ಹಚ್ಚಲು ಆರೋಗ್ಯ ಇಲಾಖೆ ಅಧಿಕಾರಿಗಳು ನಿರತರಾಗಿದ್ದಾರೆ.
ಸದ್ಯ ಮೃತನ ಮನೆಯ ಎಲ್ಲಾ ಸದಸ್ಯರನ್ನು ಜಿಲ್ಲಾಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಚಿಕ್ಕಬಳ್ಳಾಪುರ ನಗರದ ಸೋಂಕಿತ ವೃದ್ಧ ವಾಸವಿದ್ದ ಏರಿಯಾ ಅಕ್ಕ ಪಕ್ಕದ 4 ವಾರ್ಡುಗಳನ್ನು ಸೀಲ್‍ಡೌನ್ ಮಾಡಲಾಗಿದೆ.



