ಡಿವಿಜಿ ಸುದ್ದಿ, ಹರಪನಹಳ್ಳಿ: ತಾಲ್ಲೂಕಿನ ಅರಸೀಕೆರೆ ಹೋಬಳಿ ವ್ಯಾಪ್ತಿಯಲ್ಲಿನ ಚಟ್ನಿಹಳ್ಳಿ,ರಾಮಘಟ್ಟ,ಉಚ್ಚoಗಿದುರ್ಗ, ಹೊಸಕೋಟೆ,ಅರಸೀಕೆರೆ, ತೌಡೂರು,ಪುಣಭಗಟ್ಟ ಗ್ರಾಮಗಳಲ್ಲಿ ಜಗಳೂರು ಶಾಸಕ ಎಸ್ ವಿ ರಾಮಚಂದ್ರ ಕೊರೊನಾ ವೈರಸ್ ಕುರಿತು ಜಾಗೃತಿ ಮೂಡಿಸಿದರು.
ಉಪತಹಶೀಲ್ದಾರ್ ಫಾತಿಮಾ,ಕಂದಾಯ ನಿರೀಕ್ಷಕ ಶ್ರೀಧರ್,ಜಗಳೂರು ತಹಸೀಲ್ದಾರ್,ಅರಸೀಕೆರೆ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಕಿರಣ್ ಕುಮಾರ್,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ನೇತೃತ್ವದಲ್ಲಿ ಜಾಗೃತಿ ಮೂಡಿಸಿದರು.
ಈ ವೇಳೆ ಮಾತನಾಡಿದ ಶಾಸಕ ಎಸ್ ವಿ ರಾಮಚಂದ್ರ ಕೊರೊನಾ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಆದೇಶದಂತೆ ಲಾಕ್ ಡೌನ್ ಆದೇಶ ಪಾಲಿಸಬೇಕಿದೆ ಎಂದರು.
ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಯಾವುದೇ ತೊಂದರೆಗಳು ಆಗಬಾರದು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು. ಉಚ್ಚoಗಿದುರ್ಗದಲ್ಲಿ ನೀರಿನ ಸಮಸ್ಯೆ ಇದೆ ಎಂದು ಗ್ರಾಮಸ್ಥರು ಮನವಿ ಮಾಡಿದರು.



