ಡಿವಿಜಿ ಸುದ್ದಿ , ಬೆಂಗಳೂರು: ಕೊರೊನಾ ರೋಗಿಗಳಿಗೆ ಆಯುರ್ವೇದ ಚಿಕಿತ್ಸೆ ಆರಂಭಿಸುವುದಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹಿರಿಯ ವೈದ್ಯ ಡಾ.ಗಿರಿಧರ ಕಜೆ ಅವರನ್ನು ತಮ್ಮ ಕಾವೇರಿ ನಿವಾಸಕ್ಕೆ ಕರೆಸಿಕೊಂಡು ಈ ವಿಷಯ ಪ್ರಸ್ತಾಪಿಸಿದ್ದಾರೆ. ಈ ಮೂಲಕ ಕೊರೊನಾಗೆ ಆಯುರ್ವೇದ ಮಾತ್ರ ನೀಡಲು ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.
ಈ ಕುರಿತು ಸುದ್ದಿಗಾರೊಂದಿಗೆ ಮಾತನಾಡಿದ ಗಿರಿಧರ ಕಜೆ ಅವರು, ಆರಂಭದಲ್ಲಿ ಹತ್ತು ಮಂದಿ ರೋಗಿಗಳಿಗೆ ಕೋವಿಡ್ ಆಸ್ಪತ್ರೆಯಲ್ಲೇ ಆಯುರ್ವೇದ ಗುಳಿಗೆ ನೀಡಲಾಗುವುದು. ಅದರ ಫಲಿತಾಂಶ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಸರ್ಕಾರದಿಂದ ಅಧಿಕೃತ ಆದೇಶ ಬಂದ ಮೇಲೆ ಔಷಧ ಪ್ರಯೋಗ ಆರಂಭವಾಗಲಿದೆ. ಎರಡ್ಮೂರು ದಿನಗಳಲ್ಲಿ ಈ ಕಾರ್ಯ ಆರಂಭಗೊಳ್ಳಲಿದೆ. ಸರ್ಕಾರದ ಮಾರ್ಗ ಸೂಚಿ ಪ್ರಕಾರ ನಡೆಯಲಾಗುವುದು. ರಾಜ್ಯ ಸರ್ಕಾರದ ಮೂಲಕ ಐಸಿಎಂಆರ್‌ಗೆ ಪ್ರಸ್ತಾವನೆ ಕಳುಹಿಸಲಾಗಲಾಗಿತ್ತು ಎಂದರು.



