ಡಿವಿಜಿ ಸುದ್ದಿ, ಬಾಗಲಕೋಟೆ: ಒಂದೇ ದಿನ ಬಾಗಲಕೋಟೆಯಲ್ಲಿ 13 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಬಾಗಲಕೋಟೆ ಜನರು ಬೆಚ್ಚಿಬೀಳುವಂತಾಗಿದೆ.
ಬದಾಮಿ ತಾಲೂಕಿನ ಡಾಣಕಶಿರೂರು ಗ್ರಾಮದ ಗರ್ಭಿಣಿ (ರೋಗಿ 607)ರಿಂದ 13 ಮಂದಿಗೆ ಸೋಂಕು ತಗುಲಿದೆ. ಗರ್ಭಿಣಿಯ ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ 13 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಇದೀಗ ಡಾಣಕಶಿರೂರು ಗ್ರಾಮವನ್ನು ಸಂಪೂರ್ಣ ಸೀಲ್‍ಡೌನ್ ಮಾಡಲಾಗಿದ್ದು, ಗ್ರಾಮಸ್ಥರಿಗೆ ಮನೆಯಿಂದ ಹೊರಬರದಂತೆ ಸೂಚಿಸಲಾಗಿದೆ. ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳನ್ನು ಬಂದ್ ಮಾಡಲಾಗಿದೆ.
ಮೂರು ದಿನಗಳ ಹಿಂದೆ ಡಾಣಕಶಿರೂರು ಗ್ರಾಮದ ಗರ್ಭಿಣಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿತ್ತು. ಆದ್ರೆ ಗರ್ಭಿಣಿಗೆ ಸೋಂಕು ಹೇಗೆ ತಗುಲಿದೆ ಎಂಬುವುದು ಇದುವರೆಗೂ ಪತ್ತೆಯಾಗಿಲ್ಲ. ಗರ್ಭಿಣಿಗೆ ಸೋಂಕು ತಗುಲಿರುವ ವಿಷಯ ತಿಳಿದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಸೀಮಂತ ಕಾರ್ಯಕ್ರಮದಲ್ಲಿ ಕುಟುಂಬಸ್ಥರು ಸೇರಿದಂತೆ ಗ್ರಾಮದ ಬಹುತೇಕರು ಭಾಗಿಯಾಗಿದ್ದರು.



