ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆಯಲ್ಲಿಂದು ಬರೋಬ್ಬರಿ 40 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 443ಕ್ಕೆ ಏರಿಕೆಯಾಗಿದೆ.
ದಾವಣಗೆರೆಯಲ್ಲಿ ಇಂದು ದಾಖಲೆ ಪ್ರಮಾಣದಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಒಂದೇ ದಿನ 40 ಕೇಸ್ ಗಳು ಪತ್ತೆಯಾಗಿವೆ. ಈ ಮೂಲಕ ಬೆಣ್ಣೆನಗರಿ ಜನರಲ್ಲಿ ಆತಂಕ ಮೂಡಿಸಿದೆ. ಕಳೆದ ಕೆಲ ದಿನಗಳಿಂದ 5 ರಿಂದ 10 ಪಾಸಿಟಿವ್ ಕೇಸ್ ಒಳಗಡೆ ಬರುತ್ತಿತ್ತು.
ನಿನ್ನೆ 18 ಕೇಸ್ ಗಳು ಪತ್ತೆಯಾಗುವ ಮೂಲಕ ಆತಂಕ ಹೆಚ್ಚಳವಾಗುವಂತೆ ಮಾಡಿತ್ತು. ಇದೀಗ ಇಂದು ಒಂದೇ ದಿನ 40 ಕೇಸ್ ಪತ್ತೆಯಾಗುವ ಮೂಲಕ ಮತ್ತಷ್ಟು ಆತಂಕ ಹೆಚ್ಚಿದೆ. ಈ ಮೂಲಕ ಗ್ರಾಮೀಣ ಪ್ರದೇಶದಲ್ಲಿಯೂ ಸೋಂಕು ಹರಡುತ್ತಿದೆ.
ಇಂದು 4 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, 328 ಮಂದಿ ಗುಣಮುಖರಾಗಿದ್ದಾರೆ. 14 ಮಂದಿ ಸಾವನ್ನಪ್ಪಿದ್ದು, 81 ಸಕ್ರಿಯ ಕೇಸ್ ಗಳಿವೆ.



