ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 60,975 ಹೊಸ ಪ್ರಕರಣಗಳು ದಾಖಲಾಗಿದ್ದು, 848 ಮಂದಿ ಮೃತಪಟ್ಟಿದ್ದಾರೆ.
ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಒಟ್ಟು ಸೋಂಕಿತರ ಸಂಖ್ಯೆ 31,67,324ಕ್ಕೆ ಏರಿದೆ. 24 ಲಕ್ಷಕ್ಕೂ ಅಧಿಕ ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಮೃತರ ಸಂಖ್ಯೆ 58,390ಕ್ಕೆ ತಲುಪಿದ್ದು, ಸದ್ಯ 7,04,348 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ದೇಶದಲ್ಲಿಅತಿ ಹೆಚ್ಚು ಸೋಂಕಿತರು ಮಹಾರಾಷ್ಟ್ರದಲ್ಲಿದ್ದು, ಈವರೆಗೆ 6.82 ಲಕ್ಷ ಪ್ರಕರಣಗಳು ವರದಿಯಾಗಿವೆ. ಇದುವರೆಗೆ 22,253 ಮಂದಿ ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ ಇದುವರೆಗೆ 3.79 ಲಕ್ಷ ಪ್ರಕರಣಗಳಿದ್ದು, 6,517 ಮಂದಿ ಮೃತಪಟ್ಟಿದ್ದಾರೆ. ಆಂಧ್ರಪ್ರದೇಶದಲ್ಲಿ 3.53 ಲಕ್ಷ ಪಾಸಿಟಿವ್, 3,282 ಮಂದಿ ಮೃತಪಟ್ಟಿದ್ದಾರೆ. ದೆಹಲಿಯಲ್ಲಿ 1.63 ಲಕ್ಷ ಪ್ರಕರಣಗಳಿದ್ದು, 4,313 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 2.84 ಲಕ್ಷ ಪ್ರಕರಣಗಳು ಪತ್ತೆಯಾಗಿದ್ದು, ಈವರೆಗೆ 4,810 ಮಂದಿ ಮೃತಪಟ್ಟಿದ್ದಾರೆ.
India's #COVID19 case tally crosses 31 lakh mark with 60,975 fresh cases and 848 deaths in the last 24 hours.
The #COVID19 case tally in the country rises to 31,67,324 including 7,04,348 active cases, 24,04,585 cured/discharged/migrated & 58,390 deaths: Ministry of Health pic.twitter.com/X0tb6dYInC
— ANI (@ANI) August 25, 2020



