ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲಿಂದು ಒಂದೇ ದಿನ 445 ಮಂದಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, 10 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಮುಂದುವರಿದಿದ್ದು, 144 ಮಂದಿಗೆ ಸೋಂಕು ಪತ್ತೆಯಾಗಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 11,005ಕ್ಕೆ ಏರಿಕೆಯಾಗಿದೆ. ಇಂದು 246 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.
445 ಮಂದಿಯಲ್ಲಿ 65 ಅಂತರ್ ರಾಜ್ಯ ಪ್ರಯಾಣಿಕರಿದ್ದರೆ, 21 ಮಂದಿ ಅಂತರಾಷ್ಟ್ರೀಯ ಪ್ರಯಾಣಿಕರಿದ್ದಾರೆ. ಐಸಿಯುನಲ್ಲಿರುವ ರೋಗಿಗಳ ಸಂಖ್ಯೆ 178ಕ್ಕೆ ಏರಿಕೆಯಾಗಿದೆ. ಸದ್ಯ 3,905 ಸಕ್ರಿಯ ಪ್ರಕರಣಗಳಿದ್ದು 6,916 ಮಂದಿ ಬಿಡುಗಡೆಯಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು 10 ಮಂದಿ ಮೃತಪಟ್ಟಿದ್ದಾರೆ.
ಬೆಂಗಳೂರು ನಗರ 144, ಬಳ್ಳಾರಿ 47, ಕಲಬುರಗಿ 42, ಕೊಪ್ಪಳ 36, ದಕ್ಷಿಣ ಕನ್ನಡ 33, ಧಾರವಾಡ 30, ರಾಯಚೂರು 14, ಗದಗ 12, ಚಾಮರಾಜನಗರ 11, ಉಡುಪಿ 9, ಯಾದಗಿರಿ 7, ಮಂಡ್ಯ 6, ಉತ್ತರ ಕನ್ನಡ 6, ಬಾಗಲಕೋಟೆ 6, ಶಿವಮೊಗ್ಗ 6, ಕೋಲಾರ 6, ಮೈಸೂರು 5, ಚಿಕ್ಕಮಗಳೂರು 4, ಕೊಡಗು 4, ಹಾಸನ 3, ಬೆಂಗಳೂರು ಗ್ರಾಮಾಂತರ 3, ವಿಜಯಪುರ 2, ತುಮಕೂರು 2, ಹಾವೇರಿ 2, ಬೀದರ್, ಬೆಳಗಾವಿ, ದಾವಣಗೆರೆ, ರಾಮನಗರ, ಚಿತ್ರದುರ್ಗದಲ್ಲಿ ತಲಾ ಒಂದು ಪ್ರಕರಣ ದಾಖಲಾಗಿವೆ.
ಇನ್ನು 246 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕಲಬುರಗಿ 75, ಬಳ್ಳಾರಿ 38, ದಕ್ಷಿಣ ಕನ್ನಡ 32, ಬೆಂಗಳೂರು ನಗರ 21, ಉಡುಪಿ 17, ಬಾಗಲಕೋಟೆ 13, ಧಾರವಾಡ 13, ರಾಮನಗರ 11, ದಾವಣಗೆರೆ 10, ಕೋಲಾರ 6, ಚಿಕ್ಕಬಳ್ಳಾಪುರ 5, ಶಿವಮೊಗ್ಗ 3, ಬೆಳಗಾವಿ ಮತ್ತು ಮೈಸೂರಿನಲ್ಲಿ ತಲಾ ಒಬ್ಬರು ಬಿಡುಗಡೆಯಾಗಿದ್ದಾರೆ.




