ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 1694 ಹೊಸ ಕೊರೊನಾ ಪಾಸಿಟಿವ್ ಪತ್ತೆಯಾಗಿವೆ. 21 ಜನ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಇನ್ನು ಬೆಂಗಳೂರು ನಗರವೊಂದಲ್ಲಿಯೇ 994 ಪ್ರಕರಣಗಳು ವರದಿಯಾಗಿವೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 19, 710ಕ್ಕೆ ಏರಿಕೆಯಾಗಿದೆ. 8805 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 10608 ಸಕ್ರಿಯ ಪ್ರಕರಣಗಳಿವೆ. ಒಟ್ಟು 293 ಜನ ಮೃತಪಟ್ಟಿದ್ದಾರೆ. 471 ಜನ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ರಾಜ್ಯ ರಾಜಧಾನಿ ಬೆಂಗಳೂರು ಅಕ್ಷರಶಃ ನಲುಗಿ ಹೋಗಿದೆ. ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಒಂದೇ ದಿನ 994 ಹೊಸ ಪ್ರಕರಣಗಳು ಪತ್ತೆಯಾಗಿದೆ. ನಗರದ ಸೋಂಕಿತರ ಸಂಖ್ಯೆ 7173ಕ್ಕೆ ತಲುಪಿದೆ. ಈ ಪೈಕಿ 105 ಸಾವು ಸಂಭವಿಸಿದ್ದು, 770 ಮಂದಿ ಗುಣಮುಖರಾಗಿದ್ದಾರೆ. ಸದ್ಯ 6297 ಸಕ್ರಿಯ ಪ್ರಕರಣಗಳಿವೆ.
ಇನ್ನು ಬಳ್ಳಾರಿ, ದಕ್ಷಿಣ ಕನ್ನಡ ತಲಾ 97, ಕಲಬುರಗಿ 72, ತುಮಕೂರು 57, ಬೆಂಗಳೂರು ಗ್ರಾಮಾಂತರ 44, ಧಾರವಾಡ 38, ಮೈಸೂರು 35, ಮಂಡ್ಯ 33, ಬೀದರ್ 28, ಚಾಮರಾಜನಗರ 24, ಶಿವಮೊಗ್ಗ 23, ಗದಗ 19, ಉಡುಪಿ–ಕೊಡಗು ತಲಾ 16, ಯಾದಗಿರಿ 14, ಹಾಸನ–ಬೆಳಗಾವಿ ತಲಾ 13, ಕೋಲಾರ 11, ರಾಮನಗರ 10, ಬಾಗಲಕೋಟೆ 8, ರಾಯಚೂರು 7, ದಾವಣಗೆರೆ– ಉತ್ತರಕನ್ನಡ ತಲಾ 5, ವಿಜಯಪುರ–ಕೊಪ್ಪಳ ತಲಾ 4, ಹಾವೇರಿ 1, ಚಿಕ್ಕಬಳ್ಳಾಪುರ–ಚಿತ್ರದುರ್ಗದಲ್ಲಿ ತಲಾ 3 ಪ್ರಕರಣಗಳು ಪತ್ತೆಯಾಗಿವೆ.



