ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು 222 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 1031 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿಇಂದು 139 ಮಂದಿ ಕೊರೊನಾದಿಂದ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 7623ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 03 ಮಂದಿ ಕೊರೊನಾದಿಂದ ಮೃತಪಟ್ಟಿದ್ದು, ಒಟ್ಟು 199 ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇನ್ನು 2497 ಪಾಸಿಟಿವ್ ಕೇಸ್ ಗಳಿವೆ.
ಇಂದು ಪತ್ತೆಯಾದ ಪ್ರಕರಣಗಳಲ್ಲಿ ದಾವಣಗೆರೆಯಲ್ಲಿ118, ಹರಿಹರ 38, ಜಗಳೂರು 10, ಚನ್ನಗಿರಿ 24, ಹೊನ್ನಾಳಿ 22 ಹಾಗೂ ಹೊರ ಜಿಲ್ಲೆಯ 10 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಕೆಟಿಜೆ ನಗರದ 45 ವರ್ಷದ ವೃದ್ಧ, ಅಣಜಿಯ 45 ವೃದ್ಧ ಹಾಗೂ ಹರಿಹರದ 70 ವರ್ಷದ ವೃದ್ಧೆ ಮೃತಪಟ್ಟಿದ್ದಾರೆ.



