ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಅಟ್ಟಹಾಸ ಮುಂದುವರೆದಿದ್ದು, ಇಂದು 257 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 14,097ಕ್ಕೆ ಏರಿಕೆಯಾಗಿದೆ.
ಇಂದು ಕೊರೊನಾದಿಂದ ಯಾವುದೇ ಗುಣಮುಖ ಪ್ರಕರಣ ವರದಿಯಾಗಿಲ್ಲ. ಈ ಮೂಲಕ ಈವರೆಗೆ ಒಟ್ಟು 10733 ಮಂದಿ ಗುಣಮುಖರಾಗಿದ್ದಾರೆ. ಇಂದು ಕೊರಿನಾದಿಂದ ಯಾವುದೇ ಮೃತಪಟ್ಟ ವರದಿಯಾಗಿಲ್ಲ, ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 228 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಇನ್ನು 3,136 ಸಕ್ರಿಯ ಪ್ರಕರಣಗಳಿವೆ.



